ವರದಿ ಮತ್ತು ಫೋಟೋ ಕೃಪೆ : ಸುರೇಶ್ ಪಟ್ಟಣ್, ಮೊ : 98862 95817
ಸುದ್ದಿಒನ್, ಚಿತ್ರದುರ್ಗ. ನವೆಂಬರ್. 02 : ಆರ್ಯ ವೈಶ್ಯ ಸಂಘ ಮತ್ತು ಜೈ ವಾಸವಿ ಮಿತ್ರ ವೃಂದ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ 05 ರ ಭಾನುವಾರ ಹನ್ನೂಂದು ದೇವತೆಗಳ ಸಮಾಗಮ ಊರಹಬ್ಬ ಮತ್ತು ಲೋಕ ಕಲ್ಯಾಣಕ್ಕಾಗಿ ಪಂಚ್ಯಗವ್ಯ ಹೋಮವನ್ನು ನಗರದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆರ್ಯವೈಶ್ಯ ಸಂಘದ ಗೌರವಾಧ್ಯಕ್ಷರಾದ ಎಸ್.ಎನ್. ಕಾಶಿ ವಿಶ್ವನಾಥ್ ಶೆಟ್ಟಿ ಮತ್ತು ಅಧ್ಯಕ್ಷರಾದ ಎಂ.ಕೆ.ವೆಂಕಟೇಶ್ ತಿಳಿಸಿದ್ದಾರೆ.
ಜೈ ವಾಸವಿ ಮಿತ್ರ ವೃಂದದ 14ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರಲ್ಲಿ ಶ್ರೀ ಕನ್ಯಕಾಪರಮೇಶ್ವರಿ, ಶ್ರೀ ಏಕನಾಥೇಶ್ವರಿ ಶ್ರೀ ಉಚ್ಚಂಗಿಯಲ್ಲಮ್ಮ, ಶ್ರೀ ಬರಗೇರಮ್ಮ, ಶ್ರೀ ಗೌರಸಂದ್ರ ಮಾರಮ್ಮ, ಶ್ರೀ ಕಾಳಿಕಮಠೇಶ್ವರಿ, ಶ್ರೀ ದುರ್ಗಾದೇವಿ, ಶ್ರೀ ಬುಡ್ಡಾಂಬಿಕದೇವಿ, ಶ್ರೀ ಬನಶಂಕರಿ ಶ್ರೀ ಚೇಳುಗುಡ್ಡ ಗೌರಸಂದ್ರ ಹಾಗೂ ಶ್ರೀ ದೊಡ್ಡ ಮಾರಮ್ಮ ಅಮ್ಮನವರು ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 8 ಗಂಟೆಗೆ ಅಮ್ಮನವರನ್ನು ಮೆರವಣಿಗೆಯ ಮೂಲಕ ಸಿಹಿನೀರಿನ ಹೊಂಡದಿಂದ ಕರೆದುಕೊಂಡು ನಗರದ ವಾಸವಿ ಮಹಲ್ ರಸ್ತೆಯಲ್ಲಿನ ಶ್ರೀ ಕನ್ಯಕಾ ಪರಮೇಶ್ವರಿ ದೇವಾಲಯಕ್ಕೆ ಬರಲಾಗುವುದು. ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಭಕ್ತಾಧಿಗಳಿಗೆ ಅಮ್ಮನವರ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ, ಅಲ್ಲದೆ ಅಮ್ಮನವರಿಗೆ ಮಡಿಲು ಅಕ್ಕಿಯನ್ನು ಹಾಕುವುದಕ್ಕೂ ಸಹಾ ಅವಕಾಶವನ್ನು ಕಲ್ಪಿಸಲಾಗಿದೆ ಮದ್ಯಾಹ್ನ 12 ಗಂಟೆಯಿಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನಗರದ ಸರ್ವ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ಮನವಿ ಮಾಡಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…