ಬೆಂಗಳೂರು: ರಾಜ್ಯದ ಡಿಜಿಪಿ ದರ್ಜೆಯ ಐಪಿಎಸ್ ಅಧಿಕಾರಿಯಾಗಿರುವ ಡಾ.ರಾಮಚಂದ್ರರಾವ್ ರಾಸಲೀಲೆಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಅದು ಒಂದು ವರ್ಷದ ಹಿಂದಿನ ವಿಡಿಯೋಗಳು ಇದಾಗಿವೆ. ಈಗ ಎಲ್ಲೆಡೆ ವೈರಲ್ ಆಗುತ್ತಿವೆ. ಅದರಲ್ಲೂ ಕಚೇರಿಯಲ್ಲಿಯೇ, ತನ್ನ ಯೂನಿಫಾರ್ಮ್ ನಲ್ಲಿಯೇ ರಾಸಲೀಲೆಯಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಹಿಳೆಯನ್ನು ತಬ್ಬಿಕೊಳ್ಳುವುದೇನು, ಮುತ್ತುಕೊಡುವುದೇನು ಈ ವಿಡಿಯೋಗಳು ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿವೆ. ಈ ಸಂಬಂಧ ವಿಚಾರಣೆ ನಡೆಸುವುದಕ್ಕೆ ಸರ್ಕಾರ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಈಗ ವೈರಲ್ ಆಗಿರುವ ವಿಡಿಯೋ ಆಧಾರದ ಮೇಲೆ ಸಂತ್ರಸ್ತೆ ದೂರು ನೀಡಿದರೆ ಕೇಸ್ ಇನ್ನಷ್ಟು ಸ್ಟ್ರಾಂಗ್ ಆಗಲಿದೆ. ಕ್ರಿಮಿನಲ್ ಕೇಸ್ ದಾಖಲಾಗುವ ಸಾಧ್ಯತೆ ಇದೆ. ಒಂದು ವೇಳೆ ಸಂತ್ರಸ್ತೆ ದೂರು ಕೊಡಲು ಮುಂದೆ ಬಾರದೆ ಹೋದರೆ ಸರ್ಕಾರಿ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆ ಸರ್ಕಾರವೇ ಮುಂದೆ ನಿಂತು ತನಿಖೆ ನಡೆಸಲಿದೆ. ಆರೋಪ ಸಾಬೀತಾದರೆ ಕರ್ತವ್ಯ ಲೋಪದಡಿಯಲ್ಲಿ ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಸೇವೆಯಿಂದ ವಜಾಗೊಳ್ಳುವ ಸಾಧ್ಯತೆಯೂ ಇದೆ.
ಕೆ.ರಾಮಚಂದ್ರ ರಾವ್ ಕರ್ನಾಟಕ ಕೇಡರ್ ನ ಐಪಿಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ ಲಿಮಿಟೆಡ್ ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಆಗಿ ಸೇವೆ ಸಲ್ಲಿಸಿದ್ದರು. 2023ರಲ್ಲಿ ಇವರನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ ನ ಡಿಜಿಪಿ ಮತ್ತು ಅಧ್ಯಕ್ಷ ಮತ್ತುಬೆಂಡಿಯಾಗಿ ಬಡ್ತಿ ನೀಡಲಾಗಿತ್ತು. ಇವರ ಮಗಳು ನಟಿ ರನ್ಯಾ ರಾವ್ ಕೂಡ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜೈಲಲ್ಲಿದ್ದಾರೆ. ಆದರೆ ಇದೊಂದು ಎಐ ವಿಡಿಯೋ ಅಂತ ಕೂಡ ಹೇಳಲಾಗ್ತಾ ಇದೆ.. ತನಿಖೆಯ ನಂತರ ಎಲ್ಲಾ ಸತ್ಯ ಹೊರ ಬರಲಿದೆ.









