ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಕೊಲೆಗಳು ನಡೆದಿವೆ, ನಾನೇ ಮಹಿಳೆಯರ ಶವಗಳನ್ನ ಹೂತು ಹಾಕಿದ್ದೇನೆ ಎಂದು ಬುರುಡೆ ಹಿಡಿದು ಬಂದಿದ್ದ ಚಿನ್ನಯ್ಯ, ಮಾಡಿದ ಆರೋಪ ಸಾಬೀತು ಮಾಡುವಲ್ಲಿ ಎಡವಿದ್ದ. ಎಸ್ಐಟಿ ವಶದಲ್ಲಿದ್ದ ಚಿನ್ನಯ್ಯನಿಗೆ ಇದೀಗ ಜಾಮೀನು ಸಿಕ್ಕಿದೆ. ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ವಿಶೇಷ ತನಿಖಾ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿತ್ತು. ಅರ್ಜಿಯನ್ನು ಪುರಸ್ಕರಿಸಿದ ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ. ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು.
ಸೆಪ್ಟೆಂಬರ್ 6 ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು. 1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















