Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧರ್ಮಸ್ಥಳ ತಲೆಬುರುಡೆ ಕೇಸ್ : ತಿಮರೋಡಿ ಅಂಡ್ ಗ್ಯಾಂಗ್ ಗೆ ರಿಲೀಫ್

---Advertisement---

ಬೆಂಗಳೂರು: ಧರ್ಮಸ್ಥಳ ತಲೆಬುರುಡೆ ಕೇಸ್ ಗೆ ಸಂಬಂಧಪಟ್ಟಂತೆ ಹೈಕೋರ್ಟ್ ನಲ್ಲಿ ಬಿಗ್ ಅಪ್ಡೇಟ್ ಹೊರ ಬಂದಿದೆ. ಮಹೇಶ್ ತಿಮರೋಡಿ ಸೇರಿದಂತೆ ಟಿ.ಜಯಂತ್, ವಿಠಲ್ ಗೌಡ, ಗಿರೀಶ್ ಮಟ್ಟಣ್ಣನವರ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಪೀಠವು ವಾದ ಪ್ರತಿವಾದವನ್ನು ಆಲಿಸಿದ್ದು, ನವೆಂಬರ್ 12ರವರೆಗೆ ತಡೆ ನೀಡಿದೆ.

ವಕೀಲ ಬಾಲನ್ ಅರ್ಜಿದಾರರ ಪರವಾಗಿ ವಾದ ಮಂಡಿಸಿದರು. ಈಗಾಗಲೇ 9 ಬಾರಿ ನೋಟೀಸ್ ನೀಡಿ ವಿಚಾರಣೆ ನಡೆಸಲಾಗಿದೆ. ಎಫ್ಐಆರ್ ನಲ್ಲಿ ನಮ್ಮನ್ನು ಆರೋಪಿಗಳೆಂದು ಉಲ್ಲೇಖ ಮಾಡಿಲ್ಲ. ಖುದ್ದಾಗಿ ನೋಟೀಸ್ ಜಾರಿ ಮಾಡದೇ ವಾಟ್ಸಾಪ್, ಇಮೇಲ್ ಗಳಲ್ಲಿ ನೀಡಿದ್ದಾರೆ. BNSS ಸೆಕ್ಷನ್ 35(3) ಅಡಿಯಲ್ಲಿ ಸಮನ್ಸ್ ನೀಡಿದ್ದು, ಎಸ್ಐಟಿ ಸಮನ್ಸ್ ನೀಡಿರುವುದು ಕಾನೂನು ಬಾಹಿರವಾಗಿದೆ. ನಾವೂ ಆರೋಪಿಗಳೂ ಅಲ್ಲ, ಸಾಕ್ಷಿಯೂ ಅಲ್ಲವೆಂದು ವಾದ ಮಂಡಿಸಿದ್ದರು. ರಾಜಕೀಯ, ಧಾರ್ಮಿಕ ಮತ್ತು ಸಂಘಟನಾತ್ಮಕ ವೈರತ್ವದಿಂದ ನೋಟೀಸ್ ನೀಡಲಾಗಿದೆ. ವಿಚಾರಣೆ ಹೆಸರಲ್ಲಿ ಬೆಳಗ್ಗೆಯಿಂದ ಮಧ್ಯರಾತ್ರಿಯವರೆಗೆ ಕೂರಿಸಲಾಗುತ್ತೆ. ಈಗಾಗಲೇ 15 ಗಂಟೆಗೂ ಹೆಚ್ಚು ಕಾಲ ಅರ್ಜಿದಾರರ ವಿಚಾರಣೆ ನಡೆಸಲಾಗಿದೆ.

ಇನ್ನು ಎಸ್ಐಟಿ ಪರ ಎಸ್ಪಿಪಿ ಬಿಎನ್ ಜಗದೀಶ್ ವಾದ ಮಂಡನೆ ಮಾಡಿದ್ದು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾನೆ. ನಂತರ 164 ಹೇಳಿಕೆ ನೀಡಿ, ಅರ್ಜಿದಾರರ ಮೇಲೆ ಆರೋಪ ಮಾಡಿದ್ದಾನೆ. ಧರ್ಮಸ್ಥಳ ಗ್ರಾಮದ 20 ಕಡೆ ಅಗೆದು ಪರಿಶೀಲನೆ ನಡೆಸಲಾಗಿದ್ದು, ಈಹ ಆರೋಪಿಗಳನ್ನಾಗಿಸಿ ಇವರಿಗೆ ನೋಟೀಸ್ ನೀಡಲಾಗಿದೆ ಎಂದು ನ್ಯಾಯಾಲಯಕ್ಕರ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now