Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧರ್ಮಸ್ಥಳ ಟು ಕೇರಳ : ಕೊ* ರಹಸ್ಯದ ಬಗ್ಗೆ ಆರ್ ಅಶೋಕ್ ಹೇಳಿದ್ದೇನು..?

---Advertisement---

ಮೈಸೂರು: ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ಶುರು ಮಾಡಿದೆ. ಅನಾಮಧೇಯ ವ್ಯಕ್ತಿಯ ವಿಚಾರಣೆಯನ್ನು ನಡೆಸುತ್ತಿದೆ. ಇದರ ನಡುವೆ ಇಕ ವಿಚಾರಕ್ಕೆ‌ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿದ್ದು, ಅನಾಮಧೇಯ ವ್ಯಕ್ತಿಯ ಹಿಂದೆ ಕೇರಳ ಸರ್ಕಾರವಿದೆ. ಇಲ್ಲಿ ಯಾರಿಗೂ ಕಾಣದ ಕೈವೊಂದು ಕೆಲಸ ಮಾಡ್ತಿದೆ. ಪ್ರಕರಣ ಜಟಿಲವಾಗ್ತಿದೆ, ಹಲವರು ಜಟಿಲ ಮಾಡ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆರೋಪ ಮಾಡ್ತಾ ಇರೋದು ಯಾರೋ ಒಬ್ಬ ಮುಸ್ಲಿಂ ವ್ಯಕ್ತಿ. ಈ ಕೇಸ್ ಬ್ಯಾಗ್ರೌಂಡ್ ಹಿಂದೆ ಇರೋದು ಕೇರಳ‌ಸರ್ಕಾರ. ಧರ್ಮಸ್ಥಳಕ್ಕೂ ಕೇರಳಕ್ಕೂ ಏನು ಸಂಬಂಧ..? ಪ್ರಕರಣವನ್ನು ಎಸ್ಐಟಿಗೆ ವರ್ಗಾವಣೆ ಮಾಡಿದ್ದಾರೆ. ಅದನ್ನ ನಾವೂ ಸ್ವಾಗತಿಸ್ತೇವೆ, ಧರ್ಮಸ್ಥಳದವರು ಸ್ವಾಗತಿಸಿದ್ದಾರೆ. ಈ ಪ್ರಗತಿಪರರ ಗ್ಯಾಂಗ್ ನಾಳೆ ಎಸ್ಐಟಿಯನ್ನು ಒಪ್ಪುವುದಿಲ್ಲ. ಅದು ಕೂಡ ಸರಿಯಾಗಿ ತನಿಖೆ ಮಾಡಿಲ್ಲ ಅಂತಾರೆ.

ಅವರ ಪರವಾಗಿ ರಿಪೋರ್ಟ್ ಕೊಟ್ಟರೆ ಸರಿ ಎಂದು ಒಪ್ಪಿಕೊಳ್ಳುತ್ತಾರೆ. ಈ ಕಾರಣಕ್ಕೆ ಸಿಎಂ ನೇತೃತ್ವದಲ್ಲಿ ತನಿಖೆ ನಡೆಯಲಿ. ಬಂದಿರುವ ವ್ಯಕ್ತಿ ಬುರುಡೆ ಕೊಡ್ತಾನೋ, ಬುರುಡೆ ಬಿಡ್ತಾನೋ ಕಾದು ನೋಡೋಣಾ. ಈ ಧರ್ಮಸ್ಥಳದ ಸುದ್ದಿ ಅಲ್ಲಜ್ಮೀರಾ ಕೇರಳದಲ್ಲಿ ಚರ್ಚೆ ಆಗ್ತಿದೆ. ಇದರ ಹಿಂದಿನ ಷಡ್ಯಂತ್ರ ತನಿಖೆಯಲ್ಲಿ ಹೊರ ಬರಲಿದೆ. ಬಳಿಕ ನಾನು ಮತ್ತಷ್ಟು ಪ್ರತಿಕ್ರಿಯೆ ನೀಡುತ್ತೇನೆ ಎಂದು ವಿಪಕ್ಷ ಆರ್ ಅಶೋಕ್ ಅವರು ಹೇಳಿದ್ದಾರೆ. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆದ ಕಾರಣ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಲಾಗಿದ್ದು, ತನಿಖೆ ನಡೆಯುತ್ತಿದ್ದು, ಸತ್ಯಾಸತ್ಯತೆ ಬಳಿಕ ತಿಳಿಯಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment