ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಹೋರಾಟ ಮಾಡಲು ಸಿದ್ದತೆ ನಡೆಸಿಕೊಳ್ಳುತ್ತಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಸಿಎಂ ಮನೆ ಮುಂದೆ ಧರಣಿಗೆ ಸಿದ್ಧತೆ ನಡೆಸಲಾಗುತ್ತಿದೆ. ಶಿಗ್ಗಾಂವಿಯ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್ಯಾಲಿ ಆರಂಭವಾಗಲಿದೆ.
ಬಸವ ಮೃತ್ಯುಂಜಯ ಜಯಂತಿ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆಯಾದ ನಂತರ ಪ್ರತಿಭಟನಾ ರ್ಯಾಲಿ ಆರಂಭವಾಗಲಿದೆ. ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮನೆ ಮುಂದೆ ಧರಣಿ ಕೂರಲಿದ್ದಾರೆ.