Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ನಿರ್ಧಾರಕ್ಕೆ ಧಾರವಾಡ ಹೈಕೋರ್ಟ್ ತಡೆ‌‌‌‌‌‌…!

---Advertisement---

ಹುಬ್ಬಳ್ಳಿ; ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಆದರೆ ಇದೀಗ ಸರ್ಕಾರದ ಈ ನಿರ್ಧಾರವನ್ನು ಧಾರವಾಡ ಹೈಕೋರ್ಟ್ ತಡೆ ನೀಡಿದೆ. ಹುಬ್ಬಳ್ಳಿಯ ಕೇಶ್ವಾಪುರ ಸರ್ಕಲ್ ಬಳಿಯ 25 ಗುಂಟೆಗಿಂತಲೂ ಅಧಿಕ ಜಾಗದಲ್ಲಿ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿತ್ತು. ಈ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸಿದ್ದರಾಮಯ್ಯ ಸರ್ಕಾರ ನುಮತಿ ನೀಡಿತ್ತು.

ಈ ಹಿನ್ನೆಲೆಯಲ್ಲಿ ಶೇಕಡಾ 5ರಷ್ಟು ಹಣವನ್ನು ಪಾಲಿಕೆಗೆ ನೀಡಿ, 25 ಗುಂಟೆಗಿಂತಲೂ ಅಧಿಕ ಭೂಮಿಯ ಹಕ್ಕನ್ನು ಪಡೆಯುವುದಕ್ಕೆ ಕ್ಯಾಬಿನೆಟ್ ತೀರ್ಮಾನ ಮಾಡಿತ್ತು. ಸಂಪುಟದ ಈ ನಿರ್ಧಾರವನ್ನು ಪಾಲಿಕೆಯ ಬಿಜೆಪಿ ಸದಸ್ಯರು ವಿರೋಧಿಸಿದ್ದರು. ಮಹಾನಗರ ಪಾಲಿಕೆಯ ಜಮೀನನ್ನು ಸರ್ಕಾರ ಅತ್ಯಂತ ಕಡಿಮೆ ಬೆಲೆಗೆ ಖರೀದಿಸಿ, ಅಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ತೀರ್ಮಾನಿಸಿತ್ತು.

ಈ ಜಾಗದಲ್ಲಿ ಸದ್ಯಕ್ಕೆ ಹುಬ್ಬಳ್ಳಿ ಧಾರವಾಡಕ್ಕೆ ಪೂರೈಸುವ ನೀರಿನ ಟ್ಯಾಂಕ್ ಗಳಿವೆ. ಈ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶವನ್ನೇ ನಿಷೇಧ ಮಾಡಿದೆ. ಹೀಗಿರುವಾಗ ಈ ಸ್ಥಳವನ್ನು ಕಾಂಗ್ರೆಸ್ ಕಚೇರಿಗೆ ನೀಡಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಬಿಜೆಪಿ ಸದಸ್ಯರದ್ದಾಗಿದೆ. ಇದನ್ನು ಪ್ರಶ್ನಿಸಿ ಬಿಜೆಪಿ ಸದಸ್ಯರಾದ ಸಂತೋಷ ಚವ್ಹಾಣ್ ಹಾಗೂ ಬೀರಪ್ಪ ನ್ಯಾಯಾಲಯದ ಮೋರೆ ಹೋಗಿದ್ದರು. ವಾದ-ಪ್ರತಿವಾದ ಆಲಿಸಿದ ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ. ಸದ್ಯಕ್ಕೆ ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಾಂಗ್ರೆಸ್ ಕಚೇರಿಯನ್ನು ಬೇರೆ ಯಾವ ಜಾಗದಲ್ಲಿ ನಿರ್ಮಾಣ ಮಾಡುತ್ತಾರೆ ಕಾದು ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment