Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಧಾರವಾಡ : ಕೆರೆಗೆ ಈಜಲು ಹೋದ ಮೂವರು ಬಾಲಕರು ಜಲಸಮಾಧಿ!

---Advertisement---

ಸುದ್ದಿಒನ್,ಧಾರವಾಡ,ಮೇ.30: ಬೇಸಿಗೆಯ ಬಿಸಿಲಿಗೆ ಕೆರೆಗೆ ಈಜಲು ಹೋದ ಮೂವರು ಬಾಲಕರು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.

ಮೃತ ದುರ್ದೈವಿಗಳನ್ನು ಸಿಂಗನಹಳ್ಳಿ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12) ಹಾಗೂ ಆತನ ಸಹೋದರ ಅಸ್ಲಂ ವಟ್ನಾಳ್ (10) ಎಂದು ಗುರುತಿಸಲಾಗಿದೆ. ಇವರೊಂದಿಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂಬ ಬಾಲಕ ಕೂಡ ಮೃತಪಟ್ಟಿದ್ದಾನೆ. ಮೃತರಲ್ಲಿ ಇಬ್ಬರು ಸ್ವಂತ ಅಣ್ಣ-ತಮ್ಮಂದಿರಾಗಿದ್ದು, ಇಡೀ ಕುಟುಂಬ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದಾವಿಸಿ, ಕೆರೆಯಲ್ಲಿ ತೀವ್ರ ಕಾರ್ಯಾಚರಣೆ ನಡೆಸಿ ಮೂವರು ಬಾಲಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ.ಈ ದುರಂತ ಘಟನೆ ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

Join WhatsApp

Join Now

Join Telegram

Join Now