ರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಿಹೆಚ್‍ಓ ಭೇಟಿ, ಪರಿಶೀಲನೆ

1 Min Read

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

 

ಚಿತ್ರದುರ್ಗ,(ನ.19) : ಮೊಳಕಾಲ್ಮೂರು ರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕೊಂಡಾಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಅವರು ರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿ ಸೂಕ್ತ ನಿರ್ದೇಶನವನ್ನು ವೈದ್ಯರಿಗೆ ಹಾಗೂ ಸಿಬ್ಬಂದಿಗೆ ನೀಡಿದರು.

ವೈದ್ಯರು ಮತ್ತು ಸಿಬ್ಬಂದಿಯವರು ಕರ್ತವ್ಯಪಾಳಿ ಮೇಲೆ ಕರ್ತವ್ಯ ನಿರ್ವಹಿಸುವುದು ಹಾಗೂ ಕರ್ತವ್ಯ ಪಾಳಿಯನ್ನು ಸಾರ್ವಜನಿಕರಿಗೆ ಕಾಣಿಸುವಂತೆ ಪ್ರದರ್ಶಿಸಲು ತಿಳಿಸಿದರು. ಆಯಾ ರೋಗಿಗಳ ಆಧಾರದ ಮೇರೆಗೆ ಔಷಧಿಗಳನ್ನು ಸಂಗ್ರಹಣೆ ಮಾಡಿ ನಾಮಫಲಕದಲ್ಲಿ ನಮೂದಿಸುವುದು, ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ರೆಫರ್ ಮಾಡದೇ ಅಲ್ಲೇ ಆಸ್ಪತ್ರೆಯಲ್ಲೇ ಗುಣಾತ್ಮಕ ಸೇವೆ ನೀಡಬೇಕು ಎಂದು ಸೂಚಿಸಿದರು.

ಅಂಬ್ಯುಲೆನ್ಸ್‍ನಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಸೇವೆ ನೀಡುವುದು ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರಿಗೆ ಪ್ರತಿ ಕಿ.ಮೀಟರ್‍ಗೆ ರೂ.6/-ಗಳಂತೆ ಶುಲ್ಕ ಸಂಗ್ರಹಣೆಯೊಂದಿಗೆ ಸೇವೆ ನೀಡಬೇಕು ಎಂದು ಹೇಳಿದರು.

ಸಹಜ ಹೆರಿಗೆಗೆ ಹೆಚ್ಚಿನದಾಗಿ ಒತ್ತು ನೀಡಬೇಕು. ಅನಿವಾರ್ಯತೆ ಇದ್ದಲ್ಲಿ ಮಾತ್ರ ಮೇಲ್ದರ್ಜೆ ಆಸ್ಪತ್ರೆಗೆ ರೆಫರ್ ಮಾಡಲು ತಿಳಿಸಿದ ಅವರು, ಆಸ್ಪತ್ರೆಯಲ್ಲಿ ರೋಗಿಗಳ ವಾರ್ಡ್‍ಗಳು ಮತ್ತು ಆಸ್ಪತ್ರೆ ಆವರಣ ಸ್ಪಚ್ಛವಾಗಿಡಲು ಆಸ್ಪತ್ರೆಯ ವೈದ್ಯರಿಗೆ ಮತ್ತು ಸಿಬ್ಬಂದಿಯವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಕ್ಕಳ ತಜ್ಞರಾದ ಡಾ.ಸುದರ್ಶನ್, ಅರವಳಿಕೆ ತಜ್ಞರಾದ ಡಾ.ಶಬ್ಬೀರ್, ವೈದ್ಯರಾದ ಡಾ.ಮನೋಜ್, ರಾಂಪುರ ಸಮುದಾಯ ಅರೋಗ್ಯ ಕೇಂದ್ರದ ಸಿಬ್ಬಂದಿಯವರು ಹಾಜರಿದ್ದರು.

Share This Article
Leave a Comment

Leave a Reply

Your email address will not be published. Required fields are marked *