ಚಾಮರಾಜನಗರ: ಮಾಜಿ ಸಂಸದ ಆರ್ ಧ್ರುವ ನಾರಾಯಣ್ ಇನ್ನು ನೆನಪು ಮಾತ್ರ. ವಿಧಿವಿಧಾನಗಳೊಂದಿಗೆ ಧ್ರುವ ನಾರಾಯಣ್ ಅವರ ಅಂತ್ಯ ಸಂಸ್ಕಾರ ನಡೆಸಿಕೊಟ್ಟಿದ್ದಾರೆ. ತನ್ನ ಹುಟ್ಟೂರು ಹೆಗ್ಗವಾಡಿಯಲ್ಲಿಯೇ ಧ್ರುವ ನಾರಾಯಣ್ ಅವರ ಅಂತ್ಯ ಸಂಸ್ಕಾರ ನೆರವೇರಿದೆ. ಧ್ರುವ ನಾರಾಯಣ್ ಕಾಂಗ್ರೆಸ್ ಗೆ ಎಷ್ಟು ಮುಖ್ಯವಾಗಿದ್ದರು ಎಂಬುದು ಎಲ್ಲರಿಗೂ ಗೊತ್ತು. ಹೀಗಾಗಿ ಕಾಂಗ್ರೆಸ್ ನಾಯಕರೆಲ್ಲ ಅವರಿಗೆ ಕಣ್ಣೀರಿನ ವಿದಾಯ ಹೇಳಿದ್ದಾರೆ.
ಅಂತ್ಯ ಸಂಸ್ಕಾರಕ್ಕೂ ಮುನ್ನ ಅವರ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ತೋಟದ ಮನೆಗೆ ತರಲಾಗಿತ್ತು. ಅದಕ್ಕೂ ಮುನ್ನ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಬಂದ ಜನ ಧ್ರುವನಾರಾಯಣ್ ಅವರ ಅಂತಿಮ ದರ್ಶನ ಪಡೆದುಕೊಂಡರು. ಕುಟುಂಬಸ್ಥರು, ರಾಜಕೀಯ ಗಣ್ಯರು, ಬಂಧುಗಳು, ಸ್ನೇಹಿತರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿದೆ.
ಕಾಂಗ್ರೆಸ್ ಪ್ರಮುಖ ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಆಂಜನೇಯ, ಪರಮೇಶ್ವರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಕೊನೆ ಕ್ಷಣದಲ್ಲಿ ದುಃಖ ತಡೆದುಕೊಳ್ಳಲು ಆಗದೆ ಡಿಕೆ ಶಿವಕುಮಾರ್ ಹಾಗೂ ಪರಮೇಶ್ವರ್ ಜೋರು ಕಣ್ಣೀರು ಹಾಕಿದರು.





GIPHY App Key not set. Please check settings