ಬೆಂಗಳೂರು: ಕಳೆದ ಮೂರು ವರ್ಷದ ಹಿಂದೆ ಸಿಕ್ಕಾಪಟ್ಟೆ ಸದ್ದು ಮಾಡಿದ್ದ ಶೃತಿ ಹರಿಹರನ್ ಹಾಗೂ ಅರ್ಜುನ್ ಸರ್ಜಾ ಮೀಟೂ ಕೇಸ್ ಅಂತ್ಯ ಕಂಡಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಕಬ್ಬನ್ ಪಾರ್ಕ್ ಪೊಲೀಸರು ಬಿ ರಿಪೋರ್ಟ್ ಹಾಕಿ, ಕೇಸ್ ಕ್ಲೋಸ್ ಮಾಡಿದ್ದಾರೆ. ಇದರಿಂದಾಗಿ ನಟಿ ಶೃತಿ ಹರಿಹರನ್ ಗೆ ಹಿನ್ನಡೆಯಾಗಿದೆ. ಇದು ಸಹಜವಾಗಿಯೇ ಫ್ಯಾಮಿಲಿ ಮೆಂಬರ್ಸ್ ಗೆ ಸಂತಸ ತಂದಿದೆ.
ಧ್ರುವ ಸರ್ಜಾ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ವಿಡಿಯೋವೊಂದನ್ನ ಶೇರ್ ಮಾಡಿಕೊಂಡಿದ್ದು ಹರ್ಷ ವ್ಯಕ್ರಲತಪಡಿಸಿದ್ದಾರೆ. ಸೊಳ್ಳೆ ಹೊಡೆಯುತ್ತಿರುವ ವಿಡಿಯೋವದು. ಸೊಳ್ಳೆ, ಕ್ರಿಮಿ, ಕೀಟ ಅಂತೆಲ್ಲಾ ಬರೆದು ಧರ್ಮೋ ರಕ್ಷತೀ ರಕ್ಷಿತಃ ಎಂದು ಕ್ಯಾಪ್ಶಬ್ ಕೊಟ್ಟಿದ್ದಾರೆ. ಜೊತೆಗೆ ಮೇಘನಾ ರಾಜ್ ಕೂಡ ಸ್ಟೋರಿಯಲ್ಲಿ ಜಂಟಲ್ ಮ್ಯಾನ್ ಈಸ್ ಆಲ್ವೇಸ್ ಅಂತ ಬರೆದು ಅರ್ಜುನ್ ಸರ್ಜಾ ಅವರನ್ನ ಟ್ಯಾಗ್ ಮಾಡಿದ್ದಾರೆ.
2015ರಲ್ಲಿ ನಡೆದ ವಿಸ್ಮಯ ಶೂಟಿಂಗ್ ವೇಳೆ ಅರ್ಜುನ್ ಸರ್ಜಾ ನನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶೃತಿ ಹರಿಹರನ್ 2018ರಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದ್ರೆ ಅಂದು ವಿಚಾರಣೆಯಲ್ಲಿ ಸಾಕ್ಷಿಗಳ ಕೊರತೆ ಎದುರಾಗಿತ್ತು. ಇದೀಗ ಮೂರು ವರ್ಷಗಳ ಬಳಿಕ ಮತ್ತೆ ಆ ಕೇಸ್ ಓಪನ್ ಆಗಿದ್ದು, ಅರ್ಜುನ್ ಸರ್ಜಾಗೆ ಕ್ಲೀನ್ ಚಿಟ್ ಸಿಕ್ಕಿದೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…