ಬಾದಾಮಿ ಕ್ಷೇತ್ರದ ಜನ ನನ್ನ ಕೈ ಹಿಡಿದು ಗೆಲ್ಲಿಸಿದರು ಎಂದು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೆಚ್ಚು ಕೆಲಸ ಮಾಡಿದ್ದೆ. ಆದರೆ ಚಾಮುಂಡೇಶ್ವರಿ ಕ್ಷೇತ್ರದ ಜನ ನನ್ನ ಕೈ ಹಿಡಿಯಲಿಲ್ಲ. ಅದೇ ನಾನು ವರುಣಾ ಕ್ಷೇತ್ರದಲ್ಲಿ ನಿಂತಿದ್ದರೆ ನನ್ನನ್ನು ಗೆಲ್ಲಿಸುತ್ತಾ ಇದ್ದರು.
ನನ್ನನ್ನು ಗೆಲ್ಲಿಸಿ ಸಿಎಂ ಮಾಡಿದ್ದು ವರುಣಾ ಕ್ಷೇತ್ರದ ಜನ. ಹೀಗಾಗಿ ವರುಣಾ ಕ್ಷೇತ್ರದ ಜನರ ಋಣ ನನ್ನ ಮೇಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ವೇಳೆ ಪೇಸಿಎಂ ಕ್ಯಾಂಪೇನ್ ಡರ್ಟಿ ಪಾಲಿಟಿಕ್ಸ್ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದ ವಿಚಾರಕ್ಕೆ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಡರ್ಟಿ ಪಾಲಿಟಿಕ್ಸ್ ಮಾಡುವುದು ಸಂಘ ಪರಿವಾರದವರು. ನಾವೂ ಕೀಳುಮಟ್ಟದ ರಾಜಕಾರಣ ಮಾಡಿಲ್ಲ. ಭ್ರಷ್ಟಾಚಾರ ಮಾಡಿದ್ದೀರಿ ಅನ್ನೋದು ಡರ್ಟಿ ಪಾಲಿಟಿಕ್ಸಾ..? ಬಿಜೆಪಿಯವರು ರಾಜಕಾರಣದ ಉದ್ದೇಶದಿಂದ ಹೇಳುತ್ತಿದ್ದಾರೆ. ಕಾಂಗ್ರೆಸ್ ನವರು ಹೋರಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಮಹಾತ್ಮ ಗಾಂಧಿ ಕೊಂದವರನ್ನು ಇವರು ಆರಾಧಿಸುತ್ತಾರೆ. ಗಣೇಶ ಮರವಣಿಗೆಯಲ್ಲಿ ಗೋಡ್ಸೆ ಫೋಟೋ ಇಡುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.