ದೆಹಲಿ: ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು. ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಾಸ್ ಪಡೆದುಕೊಂಡಿದ್ದರ, ಸಂಬಂಧ ಸಲ್ಲಿಕೆಯಾಗಜದ್ದ ಅರ್ಜಿ ಇದಾಗಿದೆ.
ಈ ಪ್ರಕರಣ ಸಂಬಂಧ ನ್ಯಾ.ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅಲ್ಲದೇ ಡಿಕೆ ಶಿವಕುಮಾರ್ ಅವರಿಗೆ ಸಂಬಂಧಿಸಿದ ಆದಾಯ ತೆರಿಗೆ ಪ್ರಕರಣವೂ ಬಾಕಿ ಇರುವ ಹಿನ್ನೆಲೆ ಎಲ್ಲಾ ಪ್ರಕರಣಗಳ ವಿಚಾರಣೆಯಾಗಲಿದರ ಎಂದು ಸಿಜೆಐ ಬಿ ಆರ್ ಗವಾಯಿ ಹೆರಳಿದ್ದಾರೆ.
ಇದೇ ವೇಳೆ ಅಮಿತ್ ಶಾ ಅವರನ್ನ ಭೇಟಿ ಮಾಡಿದ್ದೀರಾ ಎಂಬ ಹೇಳಿಕೆಗೆ, ನಮ್ಮ ಪ್ರಕರಣದ ವಿಚಾರಣೆ ಮುಂದೂಡಿಕೆಯಾಗಿದೆ. ಮತ್ತೆ ಬರಬೇಕು ಎಂದರು. ಮೇಕೆದಾಟು ಪ್ರಕರಣ ಮಂಗಳವಾರ ವಿಚಾರಣೆ ನಡೆಯಬೇಕಿದೆ. ಆದರೆ ಬೇರೊಂದು ಪ್ರಕರಣದಲ್ಲಿ ಸಾಂವಿಧಾನಿಕ ಪೀಠ ವಿಚಾರಣೆ ನಡೆಸುತ್ತಿರು ಹಿನ್ನಲೆ ಅದೂ ಮುಂದೂಡಿಕೆಯಾಗಿದೆ. ಕೆಲವರಿಗೆ ನನ್ನನ್ನ ನೆನಪಿಸಿಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ. ಅಮಿತ್ ಶಾ ಅವರನ್ನು ಭೇಟಿಯಾಗಲು ನನಗೆ ತಲೆ ಕೆಟ್ಟಿದ್ಯಾ ಎಂದರು. ಇದೆ ವೇಳೆ ಆಲಮಟ್ಟಿ ಎತ್ತರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಕೇಂದ್ರ ಸಚಿವರು, ಬಿಜೆಪಿ ಸಂಸದರು ಉತ್ತರ ಕೊಡಬೇಕು.ಬೊಮ್ಮಾಯಿ, ಜಗದೀಶ್ ಶೆಟ್ಟರ್, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಈ ಬಗ್ಗೆ ಮಾತನಾಡಬೇಕು. ಅವರು ಇದಕ್ಕೆಲ್ಲ ಉತ್ತರ ಕೊಡಬೇಕು ಎಂದಿದ್ದಾರೆ. ದೆಹಲಿಗೆ ಹೋದಾಗ ಅಮಿತ್ ಶಾ ಅವರನ್ನು ಭೇಟಿಯಾಗಿರಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.







