ಧಾರವಾಡ: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಈ ಹಿಂದೆಯೂ ಜೀವ ಬೆದರಿಕೆ ಕರೆಗಳು ಬಂದಿವೆ. ಈ ಹಿಂದೆಯೂ ಪೊಲೀಸರಿಗೆ ದೂರು ನೀಡಿದ್ದರು. ಇತ್ತಿಚೆಗೆ ವಕ್ಫ್ ಮಂಡಳಿಯಿಂದ ಮುಸ್ಲಿಂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕಾಲೇಜು ಆರಂಭ ಮಾಡುತ್ತಿರುವ ಬಗ್ಗೆ ಪ್ರಮೋದ್ ಮುತಾಲಿಕ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಸಂದೇಶಗಳು ಬಂದಿವೆ. ಈ ಸಂಬಂಧ ಸೈಬರ್ ಕ್ರೈಂ ಗೆ ಪ್ರಮೋದ್ ಮುತಾಲಿಕ್ ದೂರು ನೀಡಿದ್ದಾರೆ.
ಅಪರಿಚಿತ ನಂಬರ್ ನಿಂದ ವಾಯ್ಸ್ ನೋಟ್ ಬಂದಿದ್ದು, ಆ ವಾಯ್ಸ್ ನಲ್ಲಿ ಅವಾಚ್ಯ ಶಬ್ಧಗಳನ್ನು ಬಳಕೆ ಮಾಡಿದ್ದಾರೆ. ಪ್ರಮೋದ್ ಮುತಾಲಿಕ್ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ. ಈ ಹಿಂದೆ ಮಸಿ ಬಳಿಸಿಕೊಂಡಿರುವೆ. ಇನ್ನೂ ಮೇಲಾದರೂ ನಮ್ಮ ಸಮುದಾಯದವರ ಬಗ್ಗೆ ಮಾತನಾಡಬೇಡ. ನಮ್ಮ ಸಮುದಾಯದ ಬಗ್ಗೆ ಮಾತನಾಡುವುದಕ್ಕೆ ನೀನು ಯಾರು..? ಎಂದು ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಈ ಸಂಬಂಧ ಉಪನಗರ ಠಾಣೆಯಲ್ಲಿ ಮುತಾಲಿಕ್ ದೂರು ದಾಖಲಿಸಿದ್ದಾರೆ.