Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಜಣ್ಣ ನೀಡಿದ್ದು ರಾಜೀನಾಮೆನಾ ಅಥವಾ ತೆಗೆದು ಹಾಕಿದ್ದ : ಪರಮೇಶ್ವರ್ ಹೇಳಿದ್ದೇನು..?

ಸಚಿವ ಪರಮೇಶ್ವರ್
---Advertisement---

ಬೆಂಗಳೂರು: ನಿನ್ನೆಯಿಂದ ಕೆ ಎನ್ ರಾಜಣ್ಣ ರಾಜೀನಾಮೆ ವಿಚಾರ ಬಹಳಷ್ಟು ಆಯಾಮದಲ್ಲಿ ಚರ್ಚೆಯಾಗ್ತಾ ಇದೆ. ಒಮ್ಮೆ ಅವರೇ ರಾಜೀನಾಮೆ ನೀಡಿದರು ಎಂದು ಹೇಳಿದರೆ ಇನ್ನೊಮ್ಮೆ ಇಲ್ಲ ಅವರನ್ನ ವಜಾ ಮಾಡಿರೋದು ಎಂಬ ಮಾತುಗಳು ಕೇಳಿ ಬರ್ತಾ ಇದೆ. ಈ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಕಾರಣ ಅಷ್ಟು ವಿವರವಾಗಿ ನನಗೆ ಗೊತ್ತಿಲ್ಲ. ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿದೆ. ನಮ್ಮಲ್ಲಿ ಹೈಕಮಾಂಡ್ ನಿರ್ಧಾರವನ್ನ ಎಲ್ಲರು ಗೌರವಿಸುತ್ತೇವೆ. ಹೈಕಮಾಂಡ್ ಈ ರೀತಿಯ ನಿರ್ಧಾರ ಯಾಕೆ ತೆಗೆದುಕೊಂಡಿದ್ದಾರೆ ಎಂಬುದು ಸಿಎಂ, ಡಿಸಿಎಂಗೆ ಗೊತ್ತಿರಬಹುದು. ಆದರೆ ನಮಗೆಲ್ಲಾ ಅದು ಗೊತ್ತಿಲ್ಲ. ರಾಜಣ್ಣ ಅವರಿಗೆ ಸ್ವಾಭಾವಿಕವಾಗಿಯೇ ಬೇಸರವಾಗಿರುತ್ತದೆ. ಅವರು ತೆಗೆದು ಹಾಕಿರೋದು. ಅವರೇ ಪತ್ರ ಬರೆದಿದ್ದಾರೆ ಅಂತ ಹೇಳಿದ್ರು. ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರೋದು. ನಾವೂ ಯಾರದ್ದೋ ಮೇಲೆ ಹೋಗಿ ಚಾಡಿ ಹೇಳಿದ್ರೆ ಹೈಕಮಾಂಡ್ ಅವರು ಕೇಳಿ ಬಿಡೋದಿಲ್ಲ. ಅವರದ್ದೇ ಆದಂತ ಸೋರ್ಸ್ ಇರುತ್ತೆ, ಮಾಹಿತಿ ಇರುತ್ತೆ. ನಮ್ಮಲ್ಲಿ ಹೈಕಮಾಂಡ್ ಗೆ ಎಲ್ಲರು ಬದ್ಧವಾಗಿರಬೇಕು. ಎಲ್ಲಾ ಪಕ್ಷದಲ್ಲೂ ಇದು ಇದ್ದೇ ಇದೆ. ಯಾವ ಕಾರಣಕ್ಕೆ ವಜಾ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದಿದ್ದಾರೆ.

ಸೆಪ್ಟೆಂಬರ್ ಕ್ರಾಂತಿ ಆಗುತ್ತೆ ಅಂತ ಹೇಳಿ ರಾಜಣ್ಣ ದೊಡ್ಡ ಸಂಚಲವನ್ನೇ ಸೃಷ್ಟಿ ಮಾಡಿದ್ದರು. ಈಗ ಅವರದ್ದೇ ತಲೆ ದಂಡ ಆಗಿರುವ ಬಗ್ಗೆ ಕೇಳಿದ್ದಕ್ಕೆ, ಆ ಬಗ್ಗೆ ನನಗೆ ಗೊತ್ತಿಲ್ಲ. ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಎಲ್ಲಾ ಗೊತ್ತಿಲ್ಲ ಎಂದಿದ್ದಾರೆ. ನನಗೂ ಆಶ್ಚರ್ಯವಾಗ್ತಾ ಇದೆ ಏನು, ಯಾಕೆ ಎಂಬುದನ್ನ ಕೇಳಿ ಅಂತ ನನಗೆ ಹೇಳಿದ್ರು. ಆದ್ರೆ ನಾನು ಯಾರನ್ನು ಸಂಪರ್ಕ‌ ಮಾಡೋದಕ್ಕೆ ಹೋಗಲಿಲ್ಲ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...