Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದರ್ಶನ್ ಕಡೆಯವರಿಂದ 20 ಕೋಟಿ ತೆಗೆದುಕೊಂಡರಾ ರೇಣುಕಾಸ್ವಾಮಿ ತಂದೆ : ಕಾಶೀನಾಥಯ್ಯ ಹೇಳಿದ್ದೇನು..?

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 14 : ರೇಣುಕಾಸ್ವಾಮಿ ಕೊಲೆ ಬಳಿಕ ಒಂದಷ್ಟು ತಿಂಗಳು ಜೈಲಿನಲ್ಲಿದ್ದ ದರ್ಶನ್ ಹಾಗೂ ಸಹಚರರು ಬಳಿಕ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಇದರ ನಡುವೆ ದರ್ಶನ್ ಕಡೆಯವರು ರೇಣುಕಾಸ್ವಾಮಿ ತಂದೆಗೆ 20 ಕೋಟಿ ಹಣ ನೀಡಿದ್ದಾರೆ ಎಂಬ ಚರ್ಚೆಯೂ ಹುಟ್ಟಿಕೊಂಡಿತ್ತು. ಆ ಪ್ರಶ್ನೆಗೆ ಕಾಶೀನಾಥಯ್ಯ ಇಂದು ಉತ್ತರಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಾಶೀನಾಥಯ್ಯ ಅವರು, ತಾವೂ ದರ್ಶನ್ ಕಡೆಯವರಿಂದ ಹಣ ಪಡೆದಿಲ್ಲ. ಜಾಮೀನು ರದ್ದಾಗಿದ್ದಕ್ಕೆ ನ್ಯಾಯದ ಮೇಲೆ ನಂಬಿಕೆ ಮೂಡಿದೆ. ಫೇಸ್ ಬುಕ್ ನಲ್ಲಿ ಏನೇನೋ ಬರುತ್ತಿದೆ. ಅಷ್ಟು ಕೋಟಿ ಕೊಟ್ಟರು ಎಂಬುದೆಲ್ಲ ಶುದ್ಧ ಸುಳ್ಳು. ನಾವೂ ಯಾರ ಬಳಿಯೂ ದುಡ್ಡು ಕೇಳಿಲ್ಲ. ಯಾರೂ ಸಹ ದುಡ್ಡು ಕೊಡಲು ಬಂದಿಲ್ಲ. ಯಾಕೆ ಈ ರೀತಿ ಹಾಕುತ್ತಾರೆ ಎಂಬುದು ನಮಗೆ ಅರ್ಥ ಆಗುತ್ತಿಲ್ಲ. ಅವರ ಸಂಪರ್ಕದಲ್ಲಿ ನಾವೂ ಇಲ್ಲ. ಫೇಸ್ಬುಕ್ ಮಹಾಶಯರಿಗೆ ನಾನು ಹೇಳುವುದು ಇಷ್ಟೆ. ನಿಜವಾಗಿ ಗೊತ್ತಿರುವ ಸಂಗತಿ ಏನಾದರೂ ಇದ್ದರೆ ಮಾತ್ರ ಹಾಕಿ ಎಂದಿದ್ದಾರೆ.

ಅಂತೆ ಕಂತೆ ವಿಚಾರಗಳನ್ನು ಹಾಕಿ ಜನರ ದಿಕ್ಕು ತಪ್ಪಿಸಬೇಡಿ. 10 ಕೋಟಿ ಕೊಟ್ಟರು, 20 ಕೋಟಿ ಕೊಟ್ಟರು ಎಂದೆಲ್ಲ ಹಾಕಿದ್ದಾರೆ. 10 ಪೈಸೆಯನ್ನೂ ನಾವೂ ಪಡೆದುಕೊಂಡಿಲ್ಲ. ದಯವಿಟ್ಟು ಸುಳ್ಳು ಸುದ್ದಿ ಹಾಕಬೇಡಿ. ಅದರಿಂದ ನಮ್ಮ ಮನೆತನದ ಗೌರವಕ್ಕೆ ಕುಂದು ಬರುತ್ತದೆ. ಸುಳ್ಳು ಸುದ್ದಿಯಿಂದ ಮನಸ್ಸುಗೆ ತುಂಬಾನೇ ನೋವಾಗುತ್ತದೆ. ಜನರಿಗೆ ನಮ್ಮ ಬಗ್ಗೆ ತಪ್ಪು ಅಭಿಪ್ರಾಯ ಬರುತ್ತದೆ. ವದಂತಿ ಹಬ್ಬಿಸಬೇಡಿ ಎಂದು ರೇಣುಕಾಸ್ವಾಮಿ ತಂದೆ ಕಾಶೀನಾಥಯ್ಯ ಮನವಿಯನ್ನ ಮಾಡಿಕೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment