Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿವಮೊಗ್ಗದಲ್ಲಿ ಜನಿವಾರ ಕತ್ತರಿಸಿ CET ಬರೆಸಿದ್ರಾ..? ಏನಿದು ಜನಿವಾರ ವಿವಾದ..?

---Advertisement---

 

ಬೆಂಗಳೂರು; ಪಿಯುಸಿ ಮುಗಿದ ಬಳಿಕ ವಿದ್ಯಾರ್ಥಿಗಳೆಲ್ಲ ತಮ್ಮ ಮುಂದಿನ ವಿಧ್ಯಾಭ್ಯಾಸದತ್ತ ಗಮನ ಹರಿಸುತ್ತಾರೆ. ಅದಕ್ಕೆ ಸಿಇಟಿ ಪ್ರಮುಖ ಪರೀಕ್ಷೆಯಾಗಿರುತ್ತದೆ. ವೃತ್ತಿಪರ ಕೋರ್ಸ್ ಗಳಿಗಾಗಿ ಈಗಾಗಲೇ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16 ಮತ್ತು 17ನೇ ತಾರೀಖು ಪರೀಕ್ಷೆ ನಡೆದಿದೆ. ನಿನ್ನೆ ಕಡೆಯ ದಿನವಾದ ಪರೀಕ್ಷೆಯಲ್ಲಿ ಜನಿವಾರ ತೆಗೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕತ್ತರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ. ವಿದ್ಯಾರ್ಥಿಗೆ ಜನಿವಾರ ತೆಗೆಯುವುದಕ್ಕೆ ಸೂಚಿಸಲಾಗಿತ್ತು. ಆದರೆ ವಿದ್ಯಾರ್ಥಿ ತೆಗೆಯಲ್ಲ ಎಂದ ಕೂಡಲೇ ಜನಿವಾರವನ್ನ ಕತ್ತರಿಸಿ ಪರೀಕ್ಷೆಯನ್ನ ಬರೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೀದರ್ ನಲ್ಲೂ ಕೂಡ ಇಂಥದ್ದೇ ಪ್ರಕರಣದ ಆರೋಪ ಕೇಳಿ ಬಂದಿದೆ. ಜನಿವಾರವನ್ನು ಧರಿಸಿಯೇ ವಿದ್ಯಾರ್ಥಿ ಎರಡು ಪರೀಕ್ಷೆಯನ್ನು ಬರೆದಿದ್ದ. ಆದರೆ ನಿನ್ನೆ ಪರೀಕ್ಷೆ ಬರೆಯಲು ಬಂದಾಗ ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರವನ್ನು ಕಂಡು ಅದನ್ನು ತೆಗೆಸಿ ಪರೀಕ್ಷೆ ಬರೆಸಿರುವ ಆರೋಪ ಕೇಳಿ ಬಂದಿದೆ.

ಜನಿವಾರ ತೆಗೆಸಿರೋ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಉನ್ನತ ಶಿಕ್ಷಣ ಸಚುವ ಎಂ.ಸಿ.ಸುಧಾಕರ್, ಈ ಘಟನೆ ಬಗ್ಗೆ ಭೈರತಿ ಸುರೇಶ್ ಅವರು ಫೋನ್ ಮಾಡಿ ಕೇಳಿದರು. ಸಂಜೆಯವರೆಗೂ ನನಗೆ ಯಾವುದೇ ಮಾಹಿತಿ ಇಲ್ಲ. ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದಾಗ ಸುಗಮವಾಗಿ ಪರೀಕ್ಷೆ ನಡೆದಿದೆ ಎಂದು ತಿಳಿಸಿದರು‌. ಆದರೆ ಶಿವಮೊಗ್ಗ ಹಾಗೂ ಬೀದರ್ ಘಟನೆಯನ್ನು ಖಂಡಿತ ಒಪ್ಪುವಂಥದ್ದಲ್ಲ. ಶಿವಮೊಗ್ಗದಲ್ಲಿ ಈ ರೀತಿ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಂಭೀರವಾಗಿ ಪರಿಗಣನೆ ಮಾಡ್ತೀವಿ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment