Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬರ ಪರಿಹಾರ : ನಾವೂ ಕೇಳುತ್ತಿರುವ ಭಿಕ್ಷೆಯಲ್ಲ ಎಂದ ಸಚಿವ ದಿನೇಶ್ ಗುಂಡೂರಾವ್

---Advertisement---

ಬೆಂಗಳೂರು: ಬರ ಅಧ್ಯಯನ ನಡೆದರು ಕೂಡ ಕೇಂದ್ರದಿಂದ ಒಂದು ಪೈಸೆಯೂ ಪರಿಹಾರ ಸಿಕ್ಕಿಲ್ಲ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಬರ ಪರಿಹಾರ ಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ. ನಾವೂ ಕೇಳುತ್ತಿರುವುದು ಭಿಕ್ಷೆಯಲ್ಲ ಎಂದಿದ್ದಾರೆ.

 

ಯಡಿಯೂರಪ್ಪನವರೆ, ಮಹಾರಾಷ್ಟ್ರ,ತಮಿಳುನಾಡು ಬಿಟ್ಟರೆ ಅತಿ‌ ಹೆಚ್ಚು GST ಕೊಡುಗೆಯಲ್ಲಿ ಕರ್ನಾಟಕವೇ ಮೂರನೆಯದು‌. ನಮ್ಮಿಂದ ಹೆಚ್ಚಿನ ತೆರಿಗೆ ಪಾಲು ಪಡೆದಿರುವ ಮೋದಿ ಸರ್ಕಾರ ನಮ್ಮ ರಾಜ್ಯಕ್ಕೆ ಏನು ಕೊಡುಗೆ ನೀಡಿದೆ.? ಹೇಳಿ ನೋಡೋಣ. ಬರ ಪರಿಹಾರಕ್ಕೆ ಹಣ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯವೇ ಹೊರತು, ಅದು ನಾವು ಕೇಳಿತ್ತಿರುವ ಭಿಕ್ಷೆಯಲ್ಲ.

 

ಮಾನ್ಯ ಯಡಿಯೂರಪ್ಪನವರೆ, ನಿಮ್ಮ ನೇತೃತ್ವದಲ್ಲಿ ಬರ ಅಧ್ಯಯನ ಮಾಡುತ್ತಿರುವುದನ್ನು ನಾನು ಶ್ಲಾಘಿಸುತ್ತೇನೆ. ನಿಮ್ಮ ಮೂಲಕವಾದರೂ ರಾಜ್ಯದ ಜನರ ಸಂಕಷ್ಟ ಮೋದಿಯವರಿಗೆ ಅರಿವಾಗಲಿ. ಈಗಾಗಲೇ ಬರದಿಂದ 31 ಸಾವಿರ ಕೋಟಿಗೂ ಹೆಚ್ಚು ನಷ್ಟ ಸಂಭವಿಸಿದೆ‌. SDRF&NDRF ನಿಯಮದ ಅನುಸಾರ 17,900 ಕೋಟಿ ಪರಿಹಾರ ರಾಜ್ಯಕ್ಕೆ ಬರಬೇಕು‌. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೇಂದ್ರಕ್ಕೆ ಮನವಿ ಕೂಡ ಸಲ್ಲಿಸಿದೆ‌. ಈ ಪರಿಹಾರದ ಹಣ ನಿಮಗೆ ಕೊಡಿಸಲು ಸಾಧ್ಯವೇ.?

 

ಯಡಿಯೂರಪ್ಪನವರೆ, ಪುಕ್ಕಟೆ ಭಾಗ್ಯಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ ಎಂದು ಹೇಳಿದ್ದೀರಿ‌. ಜನರಿಗೆ ಆರ್ಥಿಕ ಸ್ವಾತಂತ್ರ್ಯ ಕಲ್ಪಿಸುವುದನ್ನು ನೀವು ಪುಕ್ಕಟೆ ಭಾಗ್ಯ ಎಂದು ಹೇಳಿರುವುದು ಖೇದಕರ‌. ಹೋಗಲಿ, ನಿಮ್ಮ ಪ್ರಕಾರ ಪುಕ್ಕಟೆ ಭಾಗ್ಯಗಳಿಂದ ರಾಜ್ಯದ ಖಜಾನೆ ಖಾಲಿಯಾಗಿದೆ ಎಂದಿಟ್ಟುಕೊಳ್ಳೋಣ. ಆದರೆ ನಮ್ಮ ರಾಜ್ಯದಿಂದ ಅತಿ ಹೆಚ್ಚು ತೆರಿಗೆ ಪಡೆದು, ನಮ್ಮ ರಾಜ್ಯಕ್ಕೆ ನಿಮ್ಮ ಮೋದಿಯವರು ಒ‌ಂದು ನಯಾಪೈಸೆ ಪರಿಹಾರ ಕೊಡದಷ್ಟು ಅಶಕ್ತರಾಗಿದ್ದಾರೆ. ಹಾಗಾದರೆ ಮೋದಿ ಸರ್ಕಾರ ದಿವಾಳಿಯಾಗಿದೆ ಎಂದರ್ಥವಲ್ಲವೇ.?ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...