ಬೆಂಗಳೂರು: ಮಂಗಳವಾರ ಘೋಷಣೆಯಾದ ಸೇನೆಯ ಅಗ್ನಿಪಥ್ ಯೋಜನೆ ಬಗ್ಗೆ ಅಭ್ಯರ್ಥಿಗಳು ಕೂಡ ವಿರೋಧ ವ್ಯಕ್ತಪಡಿಸಿದ್ದು, ಇದೀಗ ಕಾಂಗ್ರೆಸ್ ನಾಯಕರು ವಿರೋಧಿಸುತ್ತಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕೆಪಿಸಿಸಿ ಮಾಜಿ ಅಧ್ಯಕ್ ದಿನೇಶ್ ಗುಂಡೂರಾವ್, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳು ಸೈನ್ಯ ಸೇರುವುದಿಲ್ಲ ಎಂದು ಅಗ್ನಿಪಥ್ ಯೋಜನೆಗೆ ಕಾಂಗ್ರೆಸ್ ನಾಯಕರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
‘ಅಗ್ನಿಪಥ್’ ಯೋಜನೆ ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದ್ದು, ಯೋಜನೆಯಡಿ ನೇಮಕವಾದವರು ಕೇವಲ ೪ ವರ್ಷಕ್ಕೆ ಕಡ್ಡಾಯ ನಿವೃತ್ತಿಯಾಗಬೇಕು. ಆ ನಂತರ ಯುವಕರ ಭವಿಷ್ಯವೇನು? ಎಂದು ಟ್ವೀಟ್ಟರ್’ನಲ್ಲಿ ಪ್ರಶ್ನಿಸಿದ್ದಾರೆ. ಸೇನೆಗೆ ಸೇರುವವರು ಬಡ ಮಧ್ಯಮ ವರ್ಗದ ಯುವಕರು. ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ.
ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯವಿದೆ. ಸೈನಿಕರ ಪಿಂಚಣಿ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ. ಈಗ ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ಮೋದಿ ತಾಲೀಮು ನಡೆಸುತ್ತಿದ್ದಾರೆ. ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಸಾರ್ವತ್ರಿಕ ಚುನಾವಣೆ ಬರುತ್ತಿರುವುದರಿಂದ ಈಗ ಮತ್ತೊಂದು ನಾಟಕಕ್ಕೆ ಮೋದಿ ತಾಲೀಮು ಶುರುಮಾಡಿದ್ದಾರೆ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.