ಖಾಸಗಿ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳಿಗೆ ನೇರ ಆಯ್ಕೆ ಸಂದರ್ಶನ

0 Min Read

ದಾವಣಗೆರೆ. ಸೆ.23: ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಸೆ.26 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ನೇರ ಆಯ್ಕೆ ಸಂದರ್ಶನದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ಪಿಯುಸಿ, ಐ.ಟಿ.ಐ. ಡಿಪ್ಲೋಮ, ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಬಯೋಡಾಟಾ ಮತ್ತು ಆಧಾರ್ ನಂಬರ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಡಿಸಿ ಕಚೇರಿ, ದಾವಣಗೆರೆ ಇಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ: 7483808321, 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

Share This Article