ನವದೆಹಲಿ: ಆರಂಭದಲ್ಲಿ ಕೈಕೊಟ್ಟಿದ್ದ ಮುಂಗಾರು ದಿಢೀರನೇ ಎಲ್ಲಾ ಕಡೆ ಜೋರಾಗಿದೆ. ಕರ್ನಾಟಕ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಇದೆ. ಸಾಕಷ್ಟು ಅನಾಹುತ ಕೂಡ ಸಂಭವಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರನೇ ಸಭೆ ಕರೆದಿದ್ದಾರೆ.
ಕೇಂದ್ರದ ಹಿರಿಯ ಅಧಿಕಾರಿಗಳು, ಸಚಿವರೊಂದಿಗೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಜೊತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಭಾರೀ ಮಳೆಯಿಂದ ಗುಡ್ಡಗಾಡು ರಾಜ್ಯದ ವಿವಿಧ ಭಾಗಗಳಲ್ಲಿರುವ ಜನರನ್ನು ರಕ್ಷಿಸುವಂತೆ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ.
ಮಳೆಯಿಂದಾಗಿ ಈಗಾಗಲೆ ಕೆಲವರು ಸಾವನ್ನಪ್ಪಿದ್ದಾರೆ. ಹೀಗಾಗಿ ಸ್ಥಳೀಯ ಆಡಳಿತಗಳಯ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ಪಡೆಗಳಿಗೆ ಅಲರ್ಟ್ ಆಗಿರಲು ತಿಳಿಸಿದ್ದು, ಅನಾಹುತವಾಗದಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ತಿಳಿಸಿದ್ದಾರೆ.