Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ತವ್ಯ ಲೋಪವೆಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಸಚಿವ ಟಿ. ರಘುಮೂರ್ತಿ

---Advertisement---

ಚಿತ್ರದುರ್ಗ.ಆ.11: ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ ಜವಾಬ್ದಾರಿಯಿಂದ ನಿರ್ವಹಿಸಬೇಕು. ಕರ್ತವ್ಯ ಲೋಪ ಎಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಪ್ರಕೃತಿ ವಿಕೋಪ ಪರಿಹಾರಗಳ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಹೇಳಿದರು.

 

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಜಿಲ್ಲಾ ವಿಪತ್ತು ನಿರ್ವಹಣೆ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿಕಾರಿಗಳು ಸಾರ್ವಜನಿಕರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಮಾತ್ರ ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಒಳ್ಳೆಯ ಹೆಸರು ಬರುತ್ತದೆ. ಆದರೆ, ವ್ಯವಸ್ಥೆಯಲ್ಲಿ ಲೋಪದೋಷಗಳು ಅಥವಾ ತೊಂದರೆಗಳಾದಾಗ ಸಾರ್ವಜನಿಕರು ಜನಪ್ರತಿನಿಧಿಗಳನ್ನು ಹಾಗೂ ಸರ್ಕಾರವನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡುತ್ತಾರೆ. ಆದ್ದರಿಂದ ಅಧಿಕಾರಿಗಳು ತಮ್ಮ ಅಧಿಕಾರ ಮತ್ತು ಜವಾಬ್ದಾರಿಯನ್ನು ಸರಿಯಾಗಿ ಬಳಸಿಕೊಳ್ಳಬೇಕು.
ಕೆಲವು ಅಧಿಕಾರಿಗಳು ಕ್ಷೇತ್ರ ಮಟ್ಟಕ್ಕೆ ಹೋಗಿ ಪರಿಶೀಲನೆ ನಡೆಸದೆ, ಸಭೆಗಳಲ್ಲಿ ಕೇವಲ ಕಾಗದದ ಮೇಲಿನ ಮಾಹಿತಿಯನ್ನμÉ್ಟೀ ನೀಡುತ್ತಿದ್ದಾರೆ. ಯಾರೂ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡುತ್ತಾರೋ ಅವರು ಮಾತ್ರ ಸಭೆಯಲ್ಲಿ ಆತ್ಮವಿಶ್ವಾಸದಿಂದ ಮಾಹಿತಿ ನೀಡಲು ಸಾಧ್ಯ. ಇನ್ನು ಮುಂದೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿಖರ ಮಾಹಿತಿ ನೀಡಬೇಕು.

 

ವಿಶೇಷವಾಗಿ ಪ್ರಕೃತಿ ವಿಕೋಪ ಹಾಗೂ ಬರಗಾಲದಂತಹ ಸವಾಲಿನ ಪರಿಸ್ಥಿತಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ತಾಲೂಕು ಕೇಂದ್ರಗಳಲ್ಲೇ ಇರಬೇಕು. ತುರ್ತು ಸಂದರ್ಭಗಳಲ್ಲಿ ಮೇಲಧಿಕಾರಿಗಳ ಅನುಮತಿ ಪಡೆಯದೆ ಅಥವಾ ರಜೆ ತೆಗದುಕೊಳ್ಳದೆ ಕೇಂದ್ರಸ್ಥಾನ ಬಿಟ್ಟು ತೆರಳಬಾರದು.
ಸಾರ್ವಜನಿಕರನ್ನು ಸಣ್ಣಪುಟ್ಟ ಕೆಲಸಗಳಿಗಾಗಿ ಕಚೇರಿಗಳಿಗೆ ಪದೇ ಪದೇ ಅಲೆದಾಡಿಸುವುದು ಮತ್ತು ಉದಾಸೀನತೆ ತೋರುವುದನ್ನು ಸಹಿಸಲು ಸಾಧ್ಯವಿಲ್ಲ. ಕರ್ತವ್ಯ ಲೋಪ, ನಿರ್ಲಕ್ಷ್ಯ ಅಥವಾ ಆರ್ಥಿಕ ಅವ್ಯವಹಾರಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು.

 

ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ, ಜನಸಂಪರ್ಕ ಸಭೆ ನಡೆಸಲಾಗುವುದು. ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ತ್ವರಿತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರ ರಸ್ತೆ, ನೀರಾವರಿ, ಹಕ್ಕುಪತ್ರ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನೇರವಾಗಿ ಪರಿಶೀಲಿಸಲಾಗುತ್ತದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಯಾವುದೇ ನೆಪ ಹೇಳದೆ ಅರ್ಜಿ ವಿಲೇವಾರಿಗೆ ಜವಾಬ್ದಾರರಾಗಿರುತ್ತಾರೆ ಎಂದರು.

 

ಬಿತ್ತನೆ ವೈಫಲ್ಯ ಹಾಗೂ ಮಧ್ಯಂತರ ಪರಿಹಾರ ಶಿಫಾರಸ್ಸಿಗೆ ಸೂಚನೆ:
ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಬಿತ್ತನೆ ವೈಫಲ್ಯ ಹಾಗೂ ಮಧ್ಯಂತರ ಬೆಳೆ ಪರಿಹಾರ ನೀಡಲು ಶಿಫಾರಸ್ಸು ಮಾಡುವಂತೆ ಸಚಿವ ಟಿ. ರಘುಮೂರ್ತಿ ಸೂಚಿಸಿದರು.

 

ಕೃಷಿ ರೈತರು ಮಾತ್ರವಲ್ಲದೆ ತೋಟಗಾರಿಕೆ ಹಾಗೂ ರೇμÉ್ಮ ಬೆಳೆಗಾರರಿಗೂ ಬೆಳೆ ವಿಮೆ ಮತ್ತು ಸರ್ಕಾರದ ಇತರ ಸೌಲಭ್ಯಗಳು ತಲುಪುವಂತೆ ಅಧಿಕಾರಿಗಳು ಕ್ರಮಗಳನ್ನು ಕೈಗೊಳ್ಳಬೇಕು.ರಾಗಿ ಬೆಳೆಗೆ ನೊಂದಣಿ ಮಾಡಿಕೊಳ್ಳಲು ಆಗಸ್ಟ್ 14 ರವರೆಗೆ ಅವಕಾಶವಿದ್ದು, ಇನ್ನು ಸುಮಾರು 20 ರಿಂದ 25 ಸಾವಿರ ರೈತರು ಹೆಚ್ಚುವರಿಯಾಗಿ ನೊಂದಾಯಿಸಲು ಪ್ರಯತ್ನಿಸಬೇಕು.
ಸೆಪ್ಟೆಂಬರ್‍ನಲ್ಲೂ ಮಳೆ ಕೊರತೆಯಾಗುವ ಮುನ್ಸೂಚನೆ ಇರುವುದರಿಂದ ‘ಬಿತ್ತನೆ ವೈಫಲ್ಯ’ ಹಾಗೂ ಮಧ್ಯಂತರ ಪರಿಹಾರದ ಅಡಿ ರೈತರಿಗೆ ಶೇಕಡಾ 25 ರಷ್ಟು ಪರಿಹಾರ ದೊರಕುವಂತೆ ಮಾಡಬೇಕು ಎಂದು ಸಚಿವ ಟಿ.ರಘುಮೂರ್ತಿ ಸೂಚಿಸಿದರು.

 

ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ಸುಮಾರು 3.75 ಲಕ್ಷ ರೈತರಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 6.24 ಲಕ್ಷ ಹೆಕ್ಟೇರ್ ಪೈಕಿ 1.18 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿ ಭೂಮಿಗೆ ಬಿತ್ತನೆ ವೈಫಲ್ಯದಡಿ ಬೆಳೆ ವಿಮೆ ಹಾಗೂ ಪರಿಹಾರಕ್ಕೆ ಸಂಬಂಧಿಸಿದ ಪ್ರಸ್ತಾವನೆ ಸಲ್ಲಿಕೆಯಾಗಿದೆ.  ಮುಂಬರುವ ದಿನಗಳಲ್ಲಿ ಮಧ್ಯಂತರ ಪರಿಹಾರಕ್ಕೂ ಪ್ರಸ್ತಾವನೆ ಕಳುಹಿಸಲಾಗಿದೆ. ಇದರಿಂದಾಗಿ ಜಿಲ್ಲೆಯ ಶೇ.85 ರಷ್ಟು ರೈತರಿಗೆ ವಿಮಾ ಸೌಲಭ್ಯ ದೊರೆಯಲಿದೆ. ಮಳೆ ಆಶ್ರಿತ ಹಾಗೂ ನೀರಾವರಿ ಎರಡೂ ವಿಭಾಗದ ಬೆಳೆ ಹಾನಿ ಪ್ರದೇಶಗಳನ್ನು ಒಳಗೊಂಡು ಶೇಕಡಾ 100 ರಷ್ಟು ಅರ್ಹ ರೈತರಿಗೆ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳವ ಭರವಸೆ ನೀಡಿದರು.

 

ಚಿತ್ರದುರ್ಗ ತಾಲ್ಲೂಕಿನಲ್ಲಿ  ಒಟ್ಟು 65,675 ಹೆಕ್ಟೇರ್ ಕೃಷಿ ಸಾಗುವಳಿ ಕ್ಷೇತ್ರವಿದ್ದು, 58,850 ರೈತರು ಇದ್ದಾರೆ. ಮುಂಗಾರು ಹಂಗಾಮಿನಲ್ಲಿ 154.2ಮಿ.ಮೀ. ವಾಡಿಕೆ ಮಳೆ ನಿರೀಕ್ಷೆ ಇದ್ದು, 119.5 ಮಿ.ಮೀ. ಮಳೆ ಆಗಿದ್ದು, ಶೇಕಡಾ 23 ಮಳೆ ಕೊರತೆಯಾಗಿದೆ. ಇದುವರೆಗೂ 25,154 ಹೆಕ್ಟೇರ್ ಬಿತ್ತನೆಯಾಗಿದ್ದು, ಒಟ್ಟಾರೆ ಶೇಕಡಾ 38.3% ಬಿತ್ತನೆಯಾಗಿದೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ 43,127 ರೈತರು ವಿಮೆ ಮಾಡಿಸಿದ್ದಾರೆ.ಚಿತ್ರದುರ್ಗ ತಾಲೂಕಿನಲ್ಲಿ  22,508 ಹೆಕ್ಟೇರ್ ಪ್ರದೇಶ ‘ಬಿತ್ತನೆ ವೈಫಲ್ಯ’ ವ್ಯಾಪ್ತಿಗೆ ಬರುತ್ತದೆ. 33,306 ರೈತರು ಇದರ ಲಾಭ ಪಡೆಯುತ್ತಾರೆ.
ಜಿಲ್ಲೆಯಲ್ಲಿ ಒಟ್ಟು 3,02,505 ರೈತರಿದ್ದು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕೃಷಿ ಬೆಳೆಗೆ 1,96,553 ರೈತರು, ಹವಾಮಾನ ಆಧಾರಿತ ಬೆಳೆ ವಿಮೆಯಡಿ  ತೋಟಗಾರಿಕೆ ಬೆಳೆಗಳಿಗೆ 46,947 ರೈತರು ಸೇರಿ ಒಟ್ಟು  ಸೇರಿ 2,43,075 ರೈತರು ಬೆಳೆ ವಿಮೆ ವ್ಯಾಪ್ತಿಗೆ ಒಳಪಟ್ಟಿದ್ದಾರೆ. ಜಿಲ್ಲೆಯ ಸುಮಾರು ಶೇಕಡಾ 90 ರಷ್ಟು ರೈತರಿಗೆ ಬೆಳೆ ವಿಮೆ ಯೋಜನೆಯ ಪ್ರಯೋಜನ ತಲುಪುತ್ತಿದೆ ಎಂದು ಕೃಷಿ ಜಂಟಿ ನಿರ್ದೇಶಕ ಮಂಜುನಾಥ್ ಹಾಗೂ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಮಾಹಿತಿ ನೀಡಿದರು.

 

ಸಭೆಯಲ್ಲಿ ಶಾಸಕಾರದ ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ರಾಜ್ಯ ದ್ರಾಕ್ಷ ರಸ ಮಂಡಳಿ ಅಧ್ಯಕ್ಷ ಡಾ.ಯೋಗಿಶ್ ಬಾಬು, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಗಂಜಿಗಟ್ಟೆ ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ಜಿ.ಪಂ.ಸಿಇಓ ಡಾ.ಆಕಾಶ್.ಎಸ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now