ಸರ್ಕಾರಿ ನೌಕರರು RSS ಕಾರ್ಯಕ್ರಮದಲ್ಲಿ ಭಾಗಿಯಾದ್ರೆ ಶಿಸ್ತು ಕ್ರಮ : ಪ್ರಿಯಾಂಕ್ ಖರ್ಗೆ

1 Min Read

ಬೆಂಗಳೂರು: ರಾಜ್ಯದಲ್ಲಿ ಸದ್ಯ RSS‌ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಾ ಇದೆ. ಅದರಲ್ಲೂ ಸಚಿವ ಪ್ರಿಯಾಂಕ್ ಖರ್ಗೆ ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದಿದ್ದರು. ಸರ್ಕಾರಿ ಜಾಗದಲ್ಲಿ ಯಾವುದೇ ಕಾರಣಕ್ಕೂ ಆರ್ ಎಸ್ ಎಸ್ ಕಾರ್ಯಕ್ರಮಗಳು ನಡೆಯಬಾರದು ಎಂದು ಮನವಿ ಮಾಡಿದ್ದರು. ಇದೀಗ ಸರ್ಕಾರಿ ನೌಕರರು RSS ಕಾರ್ಯಕ್ರಮದಲ್ಲಿ ಭಾಗಿಯಾದ್ರೆ ಶಿಸ್ತು ಕ್ರಮ ಕೈಗೊಳ್ಳಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರೇ ಹೇಳಿದ್ದಾರೆ.

ಖಾಸಗಿ ಚಾನೆಲ್ ನಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಸರ್ಕಾರದ ನಿಯಮದ ಏನು ಪಾಲನೆ ಇದೆಯೋ ಅದು ಪಾಲನೆಯಾಗಬೇಕು. ಗಣವೇಷ ಹಾಕಿಕೊಂಡು ಪಿಡಿಒಗಳು, ಆರೋಗ್ಯ ಅಧಿಕಾರಿಗಳು ಓಡಾಡುತ್ತಿದ್ದು, ಅವರನ್ನು ಅಮಾನತು ಮಾಡಬೇಕಾಗುತ್ತದೆ. ಆರ್ ಎಸ್ ಎಸ್ ಆಗಲಿ, ತಾಲಿಬಾನಿ ಆಗಲಿ, ಯಾರಿಗೂ ಶಾಲೆಗಳಲ್ಲಿ ಅವಕಾಶ ಕೊಡಬಾರದು. ಶಾಲೆಗಳಲ್ಲಿ ಕೋಮು ವಿಷ ಬೀಜ ಬಿತ್ತಲು ನಾವೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

 

ಯಾರೇ ಸರ್ಕಾರಿ ನೌಕರರು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ. ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ. ಅಥವಾ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ.ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಿದೆ ಹಾಗೂ ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತುಕ್ರಮ ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಕೈಗೊಳ್ಳಲಾಗುವುದೆಂದು ಪತ್ರದ ಮೂಲಕ ತಿಳಿಸಿದ್ದಾರೆ.

Share This Article