Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್‌ನಲ್ಲಿ ಮತ್ತೆ ಅಸಮಾಧಾನ; ಸಿಡಿದೆದ್ದ ಬೇಳೂರು ಗೋಪಾಲಕೃಷ್ಣ

---Advertisement---

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಧ್ವನಿ ಜೋರಾಗಿದೆ. ಹೈಕಮಾಂಡ್ 20 ಮಂದಿ ಹೊಸ ಸಚಿವರ ಪಟ್ಟಿಯನ್ನು ಪ್ರಕಟಿಸಿದ ಬೆನ್ನಲ್ಲೇ, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಾಗರ–ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಮತ್ತೊಮ್ಮೆ ಅವಕಾಶ ಕೈತಪ್ಪಿದೆ.

ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಬೇಳೂರು ಗೋಪಾಲಕೃಷ್ಣ, ಆಗಸ್ಟ್‌ 4ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ.ಶಿವಮೊಗ್ಗ ಜಿಲ್ಲೆಯಿಂದ ಈ ಬಾರಿಯೂ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡಲಾಗಿದ್ದು, ಈಡಿಗ ಸಮುದಾಯದ ಕೋಟಾದಡಿ ತಮಗೂ ಅವಕಾಶ ಸಿಗಲಿದೆ ಎಂಬ ವಿಶ್ವಾಸದಲ್ಲಿ ಬೇಳೂರು ಗೋಪಾಲಕೃಷ್ಣ ಇದ್ದರು. ಕಳೆದ ಕೆಲವು ದಿನಗಳಿಂದ ಅವರು ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿಯನ್ನೂ ನಡೆಸಿದ್ದರು. ಆದರೆ ಅಂತಿಮ ಪಟ್ಟಿಯಲ್ಲಿ ಅವರ ಹೆಸರು ಕಾಣಿಸದಿರುವುದು ಅವರಿಗೆ ತೀವ್ರ ನಿರಾಸೆ ತಂದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ನನಗೆ ನ್ಯಾಯ ಸಿಗಲಿಲ್ಲ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಮುಖ್ಯಮಂತ್ರಿಗಳ ಕುಟುಂಬದವರಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ” ಎಂದು ಗಂಭೀರ ಆರೋಪ ಮಾಡಿದರು.
“ನಿನ್ನೆಯವರೆಗೂ ಸಚಿವರ ಪಟ್ಟಿಯಲ್ಲಿ ನನ್ನ ಹೆಸರಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅದನ್ನು ಕೈಬಿಡಲಾಗಿದೆ. ಇದು ನನಗೆ ಆಗಿರುವ ಅನ್ಯಾಯ. ಇದು ಯಾವುದೇ ಒತ್ತಡ ತಂತ್ರವಲ್ಲ. ನಾನು ಹೇಳಿದಂತೆ ನಾಳೆ ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದರು.

ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಹೊರಹೊಮ್ಮುತ್ತಿರುವ ಬೆನ್ನಲ್ಲೇ ಬೇಳೂರು ಗೋಪಾಲಕೃಷ್ಣ ಅವರ ರಾಜೀನಾಮೆ ಘೋಷಣೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now