ಬೆಂಗಳೂರು; ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಹುದ್ದೆ ಬದಲಾವಣೆಯ ಚರ್ಚೆ ನಡೆಯುತ್ತಲೆ ಇದೆ. ಸಿಎಂ ಆಕಾಂಕ್ಷಿಯಾಗಿರುವ ಡಿಕೆ ಶಿವಕುಮಾರ್, ಕೆಪಿಸಿಸಿ ಹುದ್ದೆಯನ್ನು ಅಷ್ಟು ಸುಲಭವಾಗಿ ಬಿಟ್ಟು ಕೊಡೋದಿಲ್ಲ ಎಂಬ ಮಾತುಗಳು ಇದಾವೆ. ಇದರ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಸಾಕಷ್ಟು ಆಕಾಂಕ್ಷಿಗಳಿದ್ದು, ಇದೀಗ ಹೈಕಮಾಂಡ್ ಜೊತೆಗೆ ನಡೆದ ಚರ್ಚೆಯ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಇತರೆ ಚರ್ಚೆಗಳಾಗಿವೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಯಾವುದೇ ಬದಲಾವಣೆ ಇಲ್ಲ. ಒಂದಷ್ಟು ಪದಾಧಿಕಾರಿಗಳನ್ನು ನೇಮಕ ಮಾಡುತ್ತಾರೆ. ಒಂದಷ್ಟು ಜಿಲ್ಲಾ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತಾರೆ. ಇದು ಹೊರತಾಗಿ ಯಾರೂ ಸಹ ಯಾವುದೇ ವಿಷಯವನ್ನು ನನ್ನ ಬಳಿ ಚರ್ಚೆ ಮಾಡಿಲ್ಲ ಎಂದು ಹೇಳುವ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಬಿಜೆಪಿಯವರ ಜನಾಕ್ರೋಶ ಯಾತ್ರೆಯ ಬಗ್ಗೆಯೂ ಮಾತನಾಡಿ, ಬಿಜೆಒಇಯವರು ಯಾತ್ರೆ ಹೊರಟ ದಿನವೇ ಕೇಂದ್ರ ಸರ್ಕಾರದವರು ಪೆಟ್ರೋಲ್, ಡಿಸೇಲ್ ಗೆ ತಲಾ 2 ರೂಪಾಯಿ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆಯನ್ನು 50 ರೂಪಾಯಿ ಜಾಸ್ತಿ ಮಾಡಿ ಉಡ್ಘಾಟನೆ ಮಾಡಿ, ಇವರ ಯಾತ್ರೆಗೆ ಗಿಫ್ಟ್ ಕಳುಹಿಸಿದ್ದಾರೆ. ಇದರ ಬಗ್ಗೆ ಜನಸಾಮಾನ್ಯರು ಮಾಡುತ್ತಿರುವ ಗುಣಗಾನವನ್ನು ಎಲ್ಲರು ಕೇಳಬೇಕು. ಕೇಂದ್ರ ಸರ್ಕಾರದ ವಿರುದ್ಧ ಮಾಡುತ್ತಿರುವ ಜನಾಕ್ರೋಶ ಯಾತ್ರೆ ಎಂದು ಬಿಜೆಪಿಯವರು ಬೋರ್ಡ್ ಹಾಕಿಕೊಳ್ಳಬೇಕು. ಬುಧವಾರದಿಂದ ಕಚ್ಛಾ ತೈಲದ ಬೆಲೆ ಶೇಜಡ 4.23 ರಷ್ಟು ಇಳಿಕೆಯಾಗಿದೆ. ಆದರೂ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಿಲ್ಲ. ಪೆಟ್ರೋಲ್ ನ ಮೂಲ ದರ ಪ್ರತಿ ಲೀಟರ್ ಗೆ 42.60 ಪೈಸೆ ಇದೆ ಎಂದು ಮಾಹಿತಿ ನೀಡಿದ್ದಾರೆ.


