ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು ಡಿ 1: ಪತ್ರಿಕಾ ವಿತರಕರಿಗೂ ಕಾರ್ಮಿಕ ಇಲಾಖೆ ಸವಲತ್ತು ಒದಗಿಸುವ ನಿಟ್ಟಿನಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಜತೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ ವಿ ಪ್ರಭಾಕರ್ ತಿಳಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಧ್ಯಮ ಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ರಾಜ್ಯೋತ್ಸವ ಪ್ರಶಸ್ತಿ ನೀಡುವ ಸಂದರ್ಭದಲ್ಲಿ ಪತ್ರಿಕಾ ವಿತರಕರ ಸೇವೆಯನ್ನು ಸಹ ಪರಿಗಣಿಸಬೇಕು ಹಾಗೂ ಅಂತಹ ಹಿರಿಯರಿಗೂ ಗೌರವ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಡಿಕೊಂಡ ಮನವಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು.
ಮುಖ್ಯವಾಹಿನಿಯಲ್ಲಿ ಕಾರ್ಯನಿರ್ವಹಿಸುವ ಸುದ್ದಿ ಮನೆಯ ವರದಿಗಾರರಿಗೆ ಆಗಾಗ ಸನ್ಮಾನಗಳು ನಡೆಯುತ್ತಲೇ ಇರುತ್ತವೆ, ಆದರೆ ಬೆಳಗಾವುದರೊಳಗೆ ಮನೆ ಮನೆಗೆ ಪತ್ರಿಕೆ ತಲುಪಿಸುವ ಪತ್ರಿಕಾ ವಿತರಕರನ್ನು ಗುರಿತಿಸಿ ಅವರನ್ನು ಸನ್ಮಾಸಿನುವುದು ಅಷ್ಟೇ ಮುಖ್ಯ ಎಂದು ಅಭಿಪ್ರಾಯಪಟ್ಟರು.
ಬೇರೆ ಕಾರ್ಮಿಕ ವರ್ಗದಂತೆ ಪತ್ರಿಕಾ ವಿತರರಿಗೂ ಎಲ್ಲ ಸೌಲಭ್ಯಗಳು ಮತ್ತು ನೆರವುಗಳು ದೊರೆಯಬೇಕು ಎನ್ನುವ ದೃಷ್ಟಿಯಿಂದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರೊಂದಿಗೂ ಸಹ ಈ ಕುರಿತಾಗಿ ಮಾತುಕತೆ ನಡೆಸಿದ್ದು ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಅವರು ಕಲ್ಪಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ,
ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ಮಾಯಾ ಶರ್ಮಾ, ರಫೀಕ್ ಭಂಡಾರಿ, ಸುಬ್ಬು ಹೊಲೆಯಾರ್, ಮತ್ತು ವಿತರಕರಾದ ಜವರಪ್ಪ ರವರುಗಳು ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್