Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಮಾಡಿ : ಜಮೀರ್ ಅಹಮದ್‍ಖಾನ್ ಬ್ರಿಗೇಡ್‍ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 21 : ವಕ್ಫ್ ಬೋರ್ಡ್ ಆಸ್ತಿ ವಿಚಾರವಾಗಿ ವಿಜಯಪುರನಗರ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮುಸ್ಲಿಂ ಸಮುದಾಯ ಹಾಗೂ ಸಚಿವ  ಜಮೀರ್ ಅಹಮದ್‍ಖಾನ್‍ರವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್. ಜಮೀರ್ ಅಹಮದ್‍ಖಾನ್ ಬ್ರಿಗೇಡ್‍ನಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಶಾಸಕರಾಗಿ ಆಯ್ಕೆಯಾಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣುವುದಾಗಿ ಸಂವಿಧಾನದಡಿ ಪ್ರಮಾಣ ಮಾಡಿ ನಂತರ ಬಹಿರಂಗ ಭಾಷಣದಲ್ಲಿ ಮಸ್ಲಿಂ ಸಮುದಾಯವನ್ನು ನಿಂದಿಸಿ ಸಚಿವ ಬಿ.ಝಡ್.ಜಮೀರ್ ಅಹಮದ್‍ಖಾನ್‍ರವರಿಗೆ ಏಕವಚನ ಬಳಸಿ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿರುವುದರಿಂದ ಕೂಡಲೆ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಲಾಯಿತು.

ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್.ಜಮೀರ್ ಅಹಮದ್‍ಖಾನ್ ಬ್ರಿಗೇಡ್ ಜಿಲ್ಲಾಧ್ಯಕ್ಷ ಸಾದತ್, ಮುದಾಸಿರ್‍ನವಾಜ್, ರಾಜೇಶ್, ಮದನಿ, ಎಸ್.ಎನ್.ರವಿಕುಮಾರ್ ಈ ಸಂದರ್ಭದಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment