Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಾನಂದ ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ : ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
‌                         ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಡಿಸೆಂಬರ್. 27 : ಸಾಲ ಮನ್ನಾ ಆಸೆಗಾಗಿ ರೈತರು ಬರಗಾಲ ಬರಲಿ ಅಂತ ಕಾಯ್ತಾರೆ ಎಂಬ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ಖಂಡನೀಯ ಸರ್ಕಾರ ಕೂಡಲೇ ದುರಹಂಕಾರಿ ಸಚಿವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯಿಸಿದೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆಯನ್ನು ನಡೆಸಿದ ರೈತ ಸಂಘದ ಪದಾಧಿಕಾರಿಗಳು,  ಅನ್ನದಾತರ ಬಗ್ಗೆ ಕಾಳಜಿ ಇಲ್ಲದ ಕರ್ನಾಟಕ ರಾಜ್ಯ ಸರ್ಕಾರದ ಸಕ್ಕರೆ ಸಚಿವ  ಶಿವಾನಂದ ಪಾಟೀಲ್ ರವರು ರೈತರ ಬಗ್ಗೆ ಎಳ್ಳಷÀ್ಟು ಕಾಳಜಿ ಇಲ್ಲದ ಹಾಗೆ ಸಾಲ ಮನ್ನಾ ಆಸೆಗಾಗಿ ರೈತರು ಬರಗಾಲ ಬರಲಿ ಅಂತ ಕಾಯ್ತಾರೆ ಎಂಬ ಹೇಳಿಕೆ ರೈತ ವಿರೋಧಿ ನೀತಿಯಾಗಿದೆ ಯಾವುದೇ ರೈತರು ಸಾಲಮನ್ನಾಕ್ಕಾಗಿ ಬರಗಾಲ ಆಹ್ವಾನಿಸುವುದಿಲ್ಲ ಯಾವುದೇ ರಾಜ್ಯ ಸರ್ಕಾರ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ಗೊಬ್ಬರ ಯಾವುದನ್ನು ಇದುವರೆಗೂ ನೀಡಿರುವುದಿಲ್ಲ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಿರುವುದಿಲ್ಲ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕನಿಷ್ಠ ಬೆಂಬಲ ಬೆಲೆಗೆ ಕಾಯ್ದೆ ರೂಪಿಸಿರುವುದಿಲ್ಲ ಅತಿವೃಷ್ಟಿ ಹಾಗು ಅನಾವೃಷ್ಟಿಯಿಂದ ರೈತರು ಪ್ರತಿಸಾರಿಯು ನಷ್ಠ ಅನುಭವಿಸುತ್ತಿರುತ್ತಾರೆ ಮಾರುಕಟ್ಟೆಯಲ್ಲಿ ಬೆಲೆ ಸಿಗದಿದ್ದಂತ ಪಕ್ಷದಲ್ಲಿ ತಾನು ಬೆಳೆದ ಹಣ್ಣು, ತರಕಾರಿ, ಇತರೆ ತೋಟದ ಬೆಳೆಗಳನ್ನು ತಿಪ್ಪೆಗೆ ಸುರಿದು, ರಸ್ತೆಗೆ ಸುರಿದು, ಸರ್ಕಾರದ ಬಳಿ ರೈತರು ನೋವನ್ನು ತೋಡಿಕೊಂಡ ಅನೇಕ ಸಾವಿರಾರು ಉದಾಹರಣೆಗಳು ಕಣ್ಮುಂದಿವೆ ಎಂದಿದ್ದಾರೆ.

ಇಂತಹ ಸಂದರ್ಭದಲ್ಲಿ ಸಚಿವರು ಆಸಂವಿಧಾನಿಕವಾಗಿ ಪದಬಳಕೆ ಮಾಡಿರುವುದು ನಾಡಿನ ಅನ್ನದಾತರಿಗೆ ಮಾಡಿರುವಂತಹ ಅಪಮಾನ ಕಳೆದ ಮುಂಗಾರಿನಲ್ಲಿ ತೀವ್ರ ಬರಗಾಲ ಆವರಿಸಿ ರಾಜ್ಯದ ಸುಮಾರು 212 ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶ ಎಂದು ಘೋಷಿಸಿದೆ, ರೈತರು ನಷ್ಠ ಅನುಭವಿಸಿರುವ ರೂ 33,700 ಕೋಟಿ ನಷ್ಠವನ್ನು  ರಾಜ್ಯದ ಮುಖ್ಯಮಂತ್ರಿಗಳು,  ಮತ್ತು ಕಂದಾಯ ಸಚಿವರು ಪ್ರಧಾನಿ ಭೇಟಿಯಾಗಿ 17,900 ಕೋಟಿ ರೂಪಾಯಿ ಬೆಳೆ ನಷ್ಠ ಪರಿಹಾರ ನೀಡುವಂತೆ   ಮನವಿ ಮಾಡಿದಂತ ಸಂದರ್ಭದಲ್ಲಿ ಈ ದುರಹಂಕಾರಿ ರೈತ ವಿರೋಧಿ, ಕರ್ನಾಟಕ ರಾಜ್ಯ ಸರ್ಕಾರದ ಸಕ್ಕರೆ ಸಚಿವ ಶಿವಾನಂದ ಪಾಟೀಲ್‍ರನ್ನು ಮುಖ್ಯಮಂತ್ರಿಗಳು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸುತ್ತಿದ್ದೇನೆ. ವಿಳಂಬ ಧೋರಣೆ ಕೈಗೊಂಡಲ್ಲಿ ಜಿಲ್ಲೆಯಾದ್ಯಂತ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ರೈತ ಮುಖಂಡರಾಧ ಭೂತಯ್ಯ, ಧನಂಜಯ,  ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಭೂತಯ್ಯ, ಧನಂಜಯ, ಎಂ.ಬಿ.ತಿಪ್ಪೇಸ್ವಾಮಿ ಇತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!