Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ : ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ,(ಮಾ.25) :  ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹ ಗೊಳಿಸಿರುವುದನ್ನು ಪ್ರತಿಭಟಿಸಿ ಶನಿವಾರ ನಗರದ ಓನಕೆ ಒಬವ್ವ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ದ ಘೊಷಣೆಗಳನ್ನು ಕೂಗುವುದರ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದರು.

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಓನಕೆ ಒಬವ್ವ ವೃತ್ತವರೆಗೂ ಮೆರವಣಿಗೆಯನ್ನು ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುತ್ತಿದೆ.

ರಾಹುಲ್ ಗಾಂಧಿಯವರು ಸತ್ಯವನ್ನು ಹೇಳುತ್ತಿದ್ದರು. ಅದನ್ನು ಸಹಿಸದ ಬಿಜೆಪಿ ರಾಹುಲ್ ರವರ ಮೇಲೆ ಗಾಧ ಪ್ರಹಾರವನ್ನು ಮಾಡಿ ಹೀನಾ ರಾಜಕೀಯವನ್ನು ಮಾಡುತ್ತಿದೆ, ಬಿಜೆಪಿಯವರ ಈ ಕೃತ್ಯದಿಂದ ರಾಹುಲ್ ರವರು ಹೆದರಬಾರದು ನಿಮ್ಮ ಜೊತೆಗೆ ನಾವು ಇದ್ದೇವೆ ಬಿಜೆಪಿಯವರು ಎಷ್ಟೇ ಈ ರೀತಿಯಾದ ಕೃತ್ಯವನ್ನು ಮಾಡಿದರು ಸಹಾ ಎದೆಗುಂದ ಬೇಡಿ ಎಂದು ಧೈರ್ಯವನ್ನು ತುಂಬಿದರು.

ಕೇಂದ್ರದ ಬಿಜೆಪಿ ನೇತೃತ್ವದ ಮೋದಿ ಸರ್ಕಾರ ವಿನಾಕಾರಣ ರಾಹುಲ್ ಗಾಂಧಿಯವರ ಮೇಲೆ ಕಿಡಿ ಕಾರುತ್ತಿದೆ. ಇದರಿಂದ ಕಾಂಗ್ರೆಸ್ ಹೆದರುವುದಿಲ್ಲ, ಇಂತಹ ನೂರಾರು ಆಂತಕಗಳು ಬಂದರು ಸಹಾ ಕಾಂಗ್ರೆಸ್ ಎದುರಿಸುವ ಶಕ್ತಿ ನಮ್ಮಲ್ಲಿ ಇದೆ.

ರಾಹುಲ್‍ರವರು ಯಾವುದೇ ಕಾರಣದಿಂದಲೂ ಸಹಾ ಮುಂದೆ ಇಟ್ಟ ಹೆಜ್ಜೆಯನ್ನು ಹಿಂದೆ ಇಡಬಾರದು ಎಂದು ಧೈರ್ಯವನ್ನು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮೈಲಾರಪ್ಪ, ಮುರುಳಾರಾಧ್ಯ, ಚೋಟು, ಪ್ರಕಾಶ್‍ರಾಮ ನಾಯ್ಕ್, ಎನ್,ಡಿ.ಕುಮಾರ್, ಬಾಲಕೃಷ್ಣ ಯಾದವ್, ನಾಗರಾಜ್, ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?

ಮುರುಡೇಶ್ವರ: ರಾಜ್ಯದ ಉಪಚುನಾವಣೆ, ಮಹಾರಾಷ್ಟ್ರ ಎಲೆಕ್ಷನ್ ಮುಗಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೆ ಬಿಜಚ್ ಕಡೆಗೆ ಹೋಗಿದ್ದಾರೆ. ಮುರುಡೇಶ್ವರ ಬೀಚಗ ಸದ್ದಿನಲ್ಲಿ ಕೂತು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಇದೇ ವೇಳೆ ಸಂಪುಟ

ವಕ್ಫ್ ವಿರುದ್ದ ನವೆಂಬರ್ 25 ರಂದು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ : ಕರಿಕೆರೆ ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಭಾರತೀಯ ಕಿಸಾನ್ ಸಂಘದ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ

ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಿ : ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್.ಪಿ.ರವೀಂದ್ರ

ಚಿತ್ರದುರ್ಗ. ನ.22: ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿರುವ ಎಬಿಆರ್‍ಕೆ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಕೋರಿದ್ದಾರೆ.   ಜಿಲ್ಲಾಸ್ಪತ್ರೆಗೆ ಬರುವಾಗ ರೋಗಿಗಳು ತಪ್ಪದೇ ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲು ಪ್ರತಿಗಳನ್ನು

error: Content is protected !!