ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ : ಸೆಪ್ಟೆಂಬರ್ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆ ಬಂದೋಬಸ್ತ್ ಕಾರ್ಯಕ್ಕೆ 14 ಡಿವೈಸ್‌ಪಿ, 33 ಸಿಪಿಐ, 112 ಪಿಎಸ್‌ಐ, 167 ಎಎಸ್‌ಐ, 1997 ಪೊಲೀಸ್ ಕಾನ್ಸ್ಟೇಬಲ್, 658 ಗೃಹ ರಕ್ಷಕರು ಸೇರಿ 3000 ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.
ಇದರೊಂದಿಗೆ 15 ಕೆಎಸ್‌ಆರ್‌ಪಿ, 11 ಡಿಎಆರ್, 4 ಕ್ಯೂಆರ್‌ಟಿ ತುಕಡಿಗಳನ್ನು ನಿಯೋಜಿಸಲಾಗುವುದು. 81 ಕಡೆ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. 20 ವಿಡಿಯೋಗ್ರಾಫರ್‌ಗಳು ಮೆರವಣಿಗೆ ಚಿತ್ರೀಕರಣವನ್ನು ಮಾಡಲಿದ್ದಾರೆ. 9 ಚೆಕ್ ಪೋಸ್ಟ್ಗಳನ್ನು ನಿರ್ಮಿಸಲಾಗುವುದು. ಪಟಾಕಿ ಬಳಕೆಗೆ ಅವಕಾಶವಿಲ್ಲ. ಮೆರವಣಿಗೆಯಲ್ಲಿ ಡಿಜೆ ಬಳಸಲು ಪೊಲೀಸ್ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು. ಹೊರ ಜಿಲ್ಲೆಗಳಿಂದ ಆಗಮಿಸುವ ಪೊಲೀಸ್ ಸಿಬ್ಬಂದಿಗೆ ತಂಗಲು ನಗರದ ಹಾಸ್ಟೆಲ್‌ಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ ಬಂಡಾರು ಸಭೆಯಲ್ಲಿ ತಿಳಿಸಿದರು.
ಸೆ.27 ಹಾಗೂ 28 ರಂದು ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಆದೇಶಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಗೆ ಕೋರಿಕೆ ಸಲ್ಲಿಸಲಾಗಿದೆ. ಶೋಭಾಯಾತ್ರೆಯ ದಿನ ಬಿ.ಡಿ.ರಸ್ತೆಯಲ್ಲಿ ವಾಹನಗಳ ಓಡಾಟ ನಿರ್ಬಂಧಿಸಿ, ಬದಲಿ ಮಾರ್ಗದಲ್ಲಿ ಬಸ್ ಹಾಗೂ ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ ಆದೇಶ ಹೊರಡಿಸಲು ಕೋರಿಕೆ ಸಲ್ಲಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ ಬಂಡಾರು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಅಬಕಾರಿ ಉಪನಿರೀಕ್ಷಕ ಮಾದೇಶ್, ಉಪವಿಭಾಗಧಿಕಾರಿ ಎಂ.ಕಾರ್ತಿಕ್, ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿಯ ಬದ್ರನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಪದಾಧಿಕಾರಿಗಳು ಇದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್