ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ ಮೂಲಕ ಚಂದ್ರವಳ್ಳಿ ತೋಟಕ್ಕೆ ತಲುಪಲಿದೆ. ಈ ವೇಳೆ ಸಾರ್ವಜನಿಕರು ಯಾವುದೇ ಅಂಗಡಿ ಮುಂಗಟ್ಟು, ಮಳಿಗೆ ಹಾಗೂ ಕಟ್ಟಡದ ಮೇಲೆ ಏರದಿರುವಂತೆ ಬೆಸ್ಕಾಂ ಸೂಚನೆ ನೀಡಿದೆ.
ವಿದ್ಯುತ್ ತಂತಿಗಳು ಕಟ್ಟಡದ ಸಮೀಪವೇ ಹಾದು ಹೊಗಿರುತ್ತವೆ. ಇದರಿಂದ ವಿದ್ಯುತ್ ಅವಘಡಗಳು ಸಂಭವಿಸಬಹುದು. ಆದ್ದರಿಂದ ಅಂಗಡಿ ಹಾಗೂ ಕಟ್ಟಡ ಮಾಲಿಕರು ಈ ಬಗ್ಗೆ ನಿಗಾ ವಹಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿಯರ್ ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















