Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಬದಲಿಗೆ ಚಪ್ಪಲಿ ವಿತರಣೆ? ರಾಜ್ಯ ಸರ್ಕಾರದ ಹೊಸ ಚಿಂತನೆ!

---Advertisement---

ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುತ್ತಿರುವ ಶೂ ಮತ್ತು ಸಾಕ್ಸ್ ವಿತರಣಾ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಂದಾಗಿದೆ.

ಮಕ್ಕಳ ಆರೋಗ್ಯ ರಕ್ಷಣೆ, ವಿವಿಧ ಪ್ರದೇಶಗಳ ಹವಾಮಾನ ವೈಶಿಷ್ಟ್ಯ ಹಾಗೂ ಬಳಕೆಯ ಅನುಕೂಲತೆಗಳನ್ನು ಪರಿಗಣಿಸಿ, ಮುಂದಿನ ದಿನಗಳಲ್ಲಿ ಶೂಗಳ ಬದಲಿಗೆ ಉತ್ತಮ ಗುಣಮಟ್ಟದ ಚಪ್ಪಲಿಗಳನ್ನು ವಿತರಿಸುವ ಕುರಿತು ಗಂಭೀರ ಚರ್ಚೆ ನಡೆಯುತ್ತಿದೆ.

ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಂದ (DDPI) ಸಮಗ್ರ ಮಾಹಿತಿ ಮತ್ತು ಅಭಿಪ್ರಾಯ ಸಂಗ್ರಹಿಸಲು ಇಲಾಖೆ ಸೂಚನೆ ನೀಡಿದೆ. ವಿದ್ಯಾರ್ಥಿಗಳ ದೈನಂದಿನ ಅಗತ್ಯ, ಭೌಗೋಳಿಕ ಪರಿಸ್ಥಿತಿ ಹಾಗೂ ಪ್ರಾದೇಶಿಕ ವಾಸ್ತವ್ಯವನ್ನು ಆಧರಿಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಬಡ ಮತ್ತು ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಶೂ ಮತ್ತು ಸಾಕ್ಸ್ ವಿತರಿಸಲಾಗುತ್ತಿದೆಯಾದರೂ, ರಾಜ್ಯದ ಹಲವು ಭಾಗಗಳಲ್ಲಿ ಇದರ ಬಳಕೆ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂಬ ಮಾಹಿತಿ ಇಲಾಖೆಗೆ ಲಭ್ಯವಾಗಿದೆ.

ವಿಶೇಷವಾಗಿ ಕರಾವಳಿ, ಮಲೆನಾಡು ಹಾಗೂ ಹೆಚ್ಚಿನ ಮಳೆಯಾಗುವ ಪ್ರದೇಶಗಳಲ್ಲಿ ಶಾಲೆಗೆ ಹೋಗುವಾಗ ಶೂ ಮತ್ತು ಸಾಕ್ಸ್ ಸಂಪೂರ್ಣ ಒದ್ದೆಯಾಗುತ್ತವೆ. ದಿನವಿಡೀ ಒದ್ದೆಯಾದ ಶೂ ಧರಿಸುವುದರಿಂದ ಮಕ್ಕಳ ಕಾಲುಗಳಲ್ಲಿ ಫಂಗಲ್ ಸೋಂಕು, ಬ್ಯಾಕ್ಟೀರಿಯಾ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ತೊಂದರೆಗಳು ಕಾಣಿಸಿಕೊಳ್ಳುತ್ತಿರುವ ಬಗ್ಗೆ ವರದಿಗಳು ಸೂಚಿಸಿವೆ.

ಬೇಸಿಗೆಯ ದಿನಗಳಲ್ಲಿ ದೀರ್ಘಕಾಲ ಶೂ ಧರಿಸುವುದರಿಂದ ಕಾಲುಗಳಲ್ಲಿ ಹೆಚ್ಚು ಬೆವರು ಉಂಟಾಗಿ ದುರ್ವಾಸನೆ ಕಾಣಿಸಿಕೊಳ್ಳುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಅಸೌಕರ್ಯ ಉಂಟಾಗುವುದರ ಜೊತೆಗೆ ತರಗತಿ ಕೊಠಡಿಗಳ ವಾತಾವರಣದ ಮೇಲೂ ಪರಿಣಾಮ ಬೀರುತ್ತಿದೆ.ಹಳ್ಳಿಗಳ ಕಚ್ಚಾ ರಸ್ತೆಗಳಲ್ಲಿ ಮಳೆ ನೀರು ಹಾಗೂ ಕೆಸರು ಶೂ ಒಳಗೆ ನುಗ್ಗಿ ಸಾಕ್ಸ್ ಹಾಳಾಗುವ ಘಟನೆಗಳು ಸಾಮಾನ್ಯವಾಗಿವೆ. ಮಳೆ ಮತ್ತು ಬೇಸಿಗೆ ಎರಡೂ ಕಾಲಗಳಿಗೆ ಚಪ್ಪಲಿಗಳು ಹೆಚ್ಚು ಆರಾಮದಾಯಕ ಎನ್ನುವ ಅಭಿಪ್ರಾಯ ಬಲವಾಗಿ ವ್ಯಕ್ತವಾಗಿದೆ. ಅವುಗಳನ್ನು ಸುಲಭವಾಗಿ ಸ್ವಚ್ಛಗೊಳಿಸಬಹುದಾಗಿದ್ದು, ಬೇಗ ಒಣಗುತ್ತವೆ. ಇದರಿಂದ ಮಕ್ಕಳಿಗೂ ಅನುಕೂಲವಾಗುವುದರ ಜೊತೆಗೆ ಸಾಕ್ಸ್ ತೊಳೆಯುವ ತೊಂದರೆಯಿಂದ ಪೋಷಕರಿಗೂ ನಿರಾಳತೆ ಸಿಗಲಿದೆ.

ಪ್ರಸ್ತುತ ಸರ್ಕಾರ ನಿಗದಿಪಡಿಸಿರುವ ಅನುದಾನದಲ್ಲಿ ಒಂದು ಜೋಡಿ ಶೂ ಮತ್ತು ಎರಡು ಜೋಡಿ ಸಾಕ್ಸ್ ಖರೀದಿಸಬೇಕಾಗುತ್ತದೆ. ಆದರೆ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಉತ್ತಮ ಗುಣಮಟ್ಟದ ಶೂ ಖರೀದಿಸುವುದು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳಿಗೆ (SDMC) ಸವಾಲಾಗಿದೆ.

ಕಡಿಮೆ ದರದ ಶೂಗಳು ಕೆಲವೇ ತಿಂಗಳಲ್ಲಿ ಹಾಳಾಗುತ್ತಿರುವ ಹಿನ್ನೆಲೆಯಲ್ಲಿ, ಅದೇ ಮೊತ್ತದಲ್ಲಿ ಹೆಚ್ಚು ಬಾಳಿಕೆ ಬರುವ ಉತ್ತಮ ಗುಣಮಟ್ಟದ ರಬ್ಬರ್ ಅಥವಾ ಚರ್ಮದ ಚಪ್ಪಲಿಗಳನ್ನು ಖರೀದಿಸಲು ಸಾಧ್ಯ ಎಂಬ ಅಂಶವನ್ನು ಇಲಾಖೆಯ ಆಂತರಿಕ ವರದಿಗಳು ಉಲ್ಲೇಖಿಸಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now