ಸುದ್ದಿಒನ್,ಬೆಂಗಳೂರು,ಮೇ.25: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ‘ಶಕ್ತಿ’ ಯೋಜನೆಯು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಈವರೆಗೆ ಒಟ್ಟು 726 ಕೋಟಿ ಉಚಿತ ಟಿಕೆಟ್ಗಳನ್ನು ವಿತರಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಈ ಮಹತ್ತರ ಯೋಜನೆಗಾಗಿ ಸರ್ಕಾರ ಇದುವರೆಗೆ ಬರೋಬ್ಬರಿ ₹18,943 ಕೋಟಿ ಅನುದಾನವನ್ನು ವ್ಯಯಿಸಿದೆ.
ರಾಜ್ಯದ ಜನರ ಆಶೀರ್ವಾದದೊಂದಿಗೆ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ, ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯಸ್ಸನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುವುದಾಗಿ ಸರ್ಕಾರ ತಿಳಿಸಿದೆ.

ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ತಮಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಮಾತು ಕೊಟ್ಟಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ಪ್ರತಿ ಮನೆಗೂ ತಲುಪಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ.ಪ್ರಮುಖವಾಗಿ, ‘ಶಕ್ತಿ’ ಯೋಜನೆಯಡಿ ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯವನ್ನು ಪಡೆದು ವ್ಯಾಪಕವಾಗಿ ಸಂಚಾರ ನಡೆಸುತ್ತಿದ್ದಾರೆ.
ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ.
ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5… pic.twitter.com/3WVBmCnnBG
— DIPR Karnataka (@KarnatakaVarthe) May 25, 2026











