Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕ್ಷೇತ್ರದ ಎಲ್ಲಾ ವಿಕಲಚೇತನರಿಗೂ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

Facebook
Twitter
Telegram
WhatsApp

ಚಿತ್ರದುರ್ಗ.(ಏ.23): ವಿಕಲಚೇತನರಿಗೆ ವಿದ್ಯಾಭ್ಯಾಸ ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲವಾಗುವಂತೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿತ್ರದುರ್ಗ ವಿಧಾನ ಸಭಾಕ್ಷೇತ್ರ ಎಲ್ಲಾ

ವಿಕಲಚೇತನರಿಗೂ ದ್ವಿಚಕ್ರ ವಾಹನ ವಿತರಣೆ ಮಾಡಲಾಗುವುದು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.

ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿಂದು ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಅನುದಾನದಡಿ ಗಣಿಬಾದಿತ ಪ್ರದೇಶದ ದೈಹಿಕ ವಿಕಲಚೇತನರಿಗೆ 50 ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ) ವಿತರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲೆಯ ವಿವಿಧ ತಾಲೂಕುಗಳಿಂದ ಜೀವನೋಪಾಯ ಹಾಗೂ ಉದ್ಯೋಗ ಅರಸಿ, ಜಿಲ್ಲಾ ಕೇಂದ್ರಕ್ಕೆಅತಿ ಹೆಚ್ಚು ವಿಕಲಚೇತನರು ಆಗಮಿಸುತ್ತಾರೆ. ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಗೆ ಗುರಿ ನಿಗದಿಪಡಿಸಿ, ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ ಮಾಡುತ್ತಿದ್ದರಿಂದ‌, ಕ್ಷೇತ್ರದಲ್ಲಿ ಹಲವು ಜನರಿಗೆ ವಾಹನ ವಿತರಣೆ ಮಾಡುವಲ್ಲಿ ವಿಳಂಬವಾಗುತ್ತಿತ್ತು.‌ ಇದಕ್ಕೆ ಪರಿಹಾರ್ಥವಾಗಿ ಡಿ.ಎಂ.ಎಫ್.ಟಿ ಅನುದಾನ ಬಳಿಸಿ ಒಮ್ಮೆಗೆ 50 ಜನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಣೆ ಮಾಡಲಾಗಿದೆ. ವಿಕಲಚೇತನರ ಇಲಾಖೆಯಡಿ ಪ್ರಸಕ್ತ‌ ವರ್ಷ 21 ಜನರು ದ್ವಿಚಕ್ರವಾಹನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಅನುದಾನ ಲಭ್ಯತೆ ನೋಡಿಕೊಂಡು ಎಲ್ಲರಿಗೂ ವಾಹನ ವಿತರಣೆ ಮಾಡಲಾಗುವುದು ಎಂದರು.

ಇಲಾಖೆ ವತಿಯಿಂದ ಆಧಾರ ಸ್ವಯಂ‌ ಉದ್ಯೋಗ ಯೋಜ‌ನೆಯಡಿ ವಿಕಲಚೇತರಿಗೆ ಒಂದು ಲಕ್ಷ ರೂಪಾಯಿ ಸಾಲ ಸೌಲಭ್ಯ ನೀಡಲಾಗುವುದು ಇದರಲ್ಲಿ 50 ಸಾವಿರ ಸಬ್ಸಿಡಿ ನೀಡಲಾಗುತ್ತದೆ. ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಲಭ್ಯವಿದ್ದ 50 ಅನುದಾನದಲ್ಲಿ 45 ಲಕ್ಷ ರೂಪಾಯಿ ಬಳಸಿ 50 ಜನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ನೀಡಲಾಗಿದೆ. ಇಲಾಖೆ ವತಿಯಿಂದ ವಾಹನಗಳನ್ನು ನೊಂದಾಯಿಸಿ, ಒಂದು ವರ್ಷದ ಜೀವಜಿಮೆ ಸಹ ನೀಡಲಾಗಿದೆ. ನೊಂದಣಿಯ ಸ್ಮಾರ್ಟ್ ಕಾರ್ಡುಗಳು ಬಂದ ನಂತರ ವಿಕಲಚೇತನರಿಗೆ ನೀಡಲಾಗುವುದು ಎಂದು ವಿಕಲಚೇತನರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಪದ್ಮ ಇದ್ದರು

ದ್ವಿಚಕ್ರ ವಾಹನ ನೀಡಿರುವುದರಿಂದ ನಾಲ್ಕು ಗೋಡೆಗಳ ಮಧ್ಯೆ ಇರದೇ, ಎಲ್ಲರಂತೆ ಸಮಾಜದಲ್ಲಿ ಜೀವನ ನಿರ್ವಹಿಸಲು ಹಾಗೂ ಆರ್ಥಿಕವಾಗಿ ಸ್ವಾವಲಂಭಿಯಾಗಿ ಬದುಕಲು ಅವಕಾಶವಾಗಿದೆ ಎಂದು ಚಿತ್ರದುರ್ಗ ನಗರದ ಫಲಾನುಭವಿ ರಂಗಮ್ಮ ಸಂತಸ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!