ಚಿತ್ರದುರ್ಗ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಂಭಾಗ ಆಹಾರ ಧಾನ್ಯಗಳ ಕಿಟ್‍ಗಳನ್ನು ವಿತರಿಸಲಾಯಿತು.
ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಕಾರ್ಮಿಕರಿಗೆ ಕಿಟ್‍ಗಳನ್ನು ವಿತರಿಸಿ ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ ಜೀವನಕ್ಕೆ ತೊಂದರೆಯಾಗಬಾರದೆನ್ನುವ ಉದ್ದೇಶದಿಂದ ಆಹಾರ ಧಾನ್ಯದ ಕಿಟ್‍ಗಳನ್ನು ವಿತರಿಸಲಾಗುತ್ತಿದೆ. ಪ್ರತಿಯೊಬ್ಬರು ಕೊರೋನಾ ವಿರುದ್ದ ಲಸಿಕೆ ಹಾಕಿಸಿಕೊಂಡು ಎಚ್ಚರಿಕೆಯಿಂದ ಇರುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣಪ್ಪ, ಕಾರ್ಮಿಕ ಅಧಿಕಾರಿ ಮೈತ್ರಿ ಸಿ.ಸ್ವಾಮಿ, ಕಾರ್ಮಿಕ ನಿರೀಕ್ಷಕ ರಾಜಣ್ಣ ಡಿ. ಈ ಸಂದರ್ಭದಲ್ಲಿದ್ದರು. ಒಟ್ಟು 200 ಕಾರ್ಮಿಕರಿಗೆ ಕಿಟ್‍ಗಳನ್ನು ವಿತರಿಸಲಾಯಿತು.