Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಜಿಟಲ್ ರೂಪದಲ್ಲಿ ಭೂದಾಖಲೆ ವಿತರಣೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

---Advertisement---

 

ಚಿತ್ರದುರ್ಗ. ಜುಲೈ. 15: ಕಂದಾಯ ಇಲಾಖೆಯು ಕೈಬರಹದಲ್ಲಿ ಭೂದಾಖಲೆ ನೀಡುವ ವ್ಯವಸ್ಥೆಗೆ ತಿಲಾಂಜಲಿ ಹಾಡಿದ್ದು, ಡಿಜಿಟಲ್ ರೂಪದಲ್ಲಿ ವಿತರಿಸುವುದನ್ನು ಕಡ್ಡಾಯಗೊಳಿಸಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಈಗಾಗಲೇ ಡಿಜಿಟಲ್ ಭೂದಾಖಲೆಗಳ ವಿತರಣೆ ಶುರುವಾಗಿದೆ. ಇನ್ನೂ ಮುಂದೆ “ಎ” ಹಾಗೂ “ಬಿ” ವರ್ಗದ ಭೂ ದಾಖಲೆಗಳನ್ನು ಸಂಪ್ರದಾಯಕ ದೃಢೀಕೃತ ನಕಲು ಪ್ರತಿ ಅಥವಾ ಕೈಬರಹದ ಮೂಲಕ ನೀಡುವ ಬದಲಾಗಿ ಡಿಜಿಟಲ್ ರೂಪದಲ್ಲಿಯೇ ನೀಡಲಿದೆ. ಸದ್ಯ ಜಿಲ್ಲೆಯ ಎಲ್ಲಾ ತಹಶೀಲ್ದಾರ್ ಕಚೇರಿಗಳಲ್ಲಿ ಡಿಜಿಟಲ್ ದಾಖಲೆ ನೀಡಲಾಗುತ್ತಿದೆ.

ಅರ್ಜಿದಾರರು ಕೋರುವ ಭೂ ದಾಖಲೆ ಈಗಾಗಲೇ ಸ್ಕ್ಯಾನ್ ಆಗಿ ದೃಢೀಕರಣಗೊಂಡಿದ್ದರೆ ಒಂದೇ ದಿನದಲ್ಲಿ ಡಿಜಿಟಲ್ ದಾಖಲೆ ವಿತರಣೆ ಆಗಲಿದೆ. ಒಂದೊಮ್ಮೆ ಸ್ಕ್ಯಾನಿಂಗ್ ಪ್ರಕ್ರಿಯೆ ಆಗಿರದಿದ್ದರೇ 07 ದಿನಗಳೊಳಗೆ ಡಿಜಿಟಲ್ ದಾಖಲೆ ವಿತರಣೆ ಆಗಲಿದೆ. ಇದರಿಂದ ಭೂದಾಖಲೆಗಳನ್ನು ಯಾವುದೇ ಅಡಚಣೆ ವಿಳಂಬವಿಲ್ಲದಂತೆ ಪಡೆಯಲು ಅನುಕೂಲವಾಗಲಿದೆ.

 

ಭೂದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂರಕ್ಷಿಸುವ ಉದ್ದೇಶದಿಂದ ಕಂದಾಯ ಇಲಾಖೆ ಈಗಾಗಲೇ ಭೂ ಸುರಕ್ಷಾ ಯೋಜನೆ ಜಾರಿಗೊಳಿಸಿದೆ. ಈ ಬಗ್ಗೆ ರೈತರು ಹಾಗೂ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment