Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರೋಗ್ಯ ಇಲಾಖೆ ನೌಕರರಿಗೆ ರಾಷ್ಟ್ರಧ್ವಜ ವಿತರಣೆ

Facebook
Twitter
Telegram
WhatsApp

ಚಿತ್ರದುರ್ಗ,( ಆಗಸ್ಟ್ 11) :  ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕಾಗಿ ಆರೋಗ್ಯ ಇಲಾಖೆಯ ನೌಕರರಿಗೆ ರಾಷ್ಟ್ರಧ್ವಜ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಅಸಂಖ್ಯಾತ ಹೋರಾಟ, ತ್ಯಾಗ, ಬಲಿದಾನಗಳ ಕಾರಣದಿಂದ ದಾಸ್ಯದ ಸಂಕೋಲೆಯಿಂದ ಬಿಡುಗಡೆಯಾದ ಭಾರತಾಂಬೆಗೆ ಪ್ರಾಪ್ತಿಯಾದ ಸ್ವಾತಂತ್ರ್ಯಕ್ಕೆ ಈಗ ಅಮೃತ ಮಹೋತ್ಸವದ ಸಂಭ್ರಮ. ಈ ಹಿನ್ನಲೆಯಲ್ಲಿ ಅದಕ್ಕೆ ಕಾರಣರಾದ ಎಲ್ಲರನ್ನೂ ಸ್ಮರಿಸುವುದು ಹಾಗೂ ಗೌರವಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಪ್ರತಿ ಮನೆ ಮನೆಯಲ್ಲಿಯೂ ರಾಷ್ಟ್ರಧ್ವಜ ಹಾರಿಸಿ, ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಆರೋಗ್ಯ ಇಲಾಖೆಯ ನೌಕರರಿಗೆ ಸಂದೇಶ ನೀಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮೂಲಕ 6 ಸಾವಿರ ಧ್ವಜವನ್ನು ಧ್ವಜ ಒಂದಕ್ಕೆ ರೂ. 22ರಂತೆ ಖರೀದಿಸಿ  ಜಿಲ್ಲಾ ಆರೋಗ್ಯ ಇಲಾಖೆ ನೌಕರರಿಗೆ ಹಂಚಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಕಾಶಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ, ಸರ್ಕಾರಿ ನೌಕರರ ಸಂಘದ ಪದಾಧಿಕಾರಿ ಭಾಗೇಶ್ ಹಾಗೂ ಚಿತ್ರದುರ್ಗ ತಾಲ್ಲೂಕಿನ ಎಲ್ಲಾ ಆರೋಗ್ಯ ಇಲಾಖೆ ನೌಕರರು ಭಾಗವಹಿಸಿದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಇಲಾಖೆಯ ನೌಕರರಿಗೆ ಹರ್ ಘರ್ ತಿರಂಗಾ ಕಾರ್ಯಕ್ರಮಕ್ಕಾಗಿ ರಾಷ್ಟ್ರಧ್ವಜ ವಿತರಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

error: Content is protected !!