Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾದಕ ವಸ್ತುಗಳ ವಿರುದ್ಧ ಸಮರಕ್ಕೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ: ಸಮನ್ವಯದಿಂದ ಕ್ರಮಕ್ಕೆ ಕರೆ

---Advertisement---

ಚಿತ್ರದುರ್ಗ. ಏ.09: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣಗಳು ಹೆಚ್ಚಳವಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಲು ಮತ್ತು ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡಲು ಪೊಲೀಸ್, ಅಬಕಾರಿ, ಅರಣ್ಯ, ಕೃಷಿ, ತೋಟಗಾರಿಕೆ ಸೇರಿದಂತೆ ಶಾಲಾ ಕಾಲೇಜುಗಳ ಮುಖ್ಯಸ್ಥರು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ನ್ಯಾಷಿನಲ್ ನಾರ್ಕೊಟಿಕ್ಸ್ ಕೋ-ಆರ್ಡಿನೇಷನ್ ಪೋರ್ಟಲ್ಸ (NCORD) ಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಗಾಂಜಾ ಮಾರಾಟದ ಪ್ರಕರಣಗಳು ಕಡಿಮೆ ಇವೆ. ಆದರೆ, ಮಾದಕ ವಸ್ತುಗಳ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ವಿಚಾರವಾಗಿದ್ದು, ಈ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ. ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗದಂತೆ ತಡೆಯಲು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ-ಕಾಲೇಜುಗಳಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಬಕಾರಿ ಇಲಾಖೆ ವತಿಯಿಂದ ಮದ್ಯದ ಅಂಗಡಿಗಳಲ್ಲಿ ಮಾದಕ ವಸ್ತುಗಳ ಮಾರಾಟ ಮಾಡದಂತೆ ಎಚ್ಚರಿಕೆ ಫಲಕಗಳನ್ನು ಹಾಕಿಸುವುದರ ಜೊತೆಗೆ ನಿರಂತರವಾಗಿ ತಪಾಸಣೆ ನಡೆಸಬೇಕು. ಜಿಲ್ಲೆಯು ಆಂಧ್ರಪ್ರದೇಶದೊAದಿಗೆ ಸುಮಾರು 150 ಕಿ.ಮೀ ಗಡಿಯನ್ನು ಹಂಚಿಕೊAಡಿದೆ. ಈ ಭಾಗದ ಸಣ್ಣಪುಟ್ಟ ಕಾಲುದಾರಿಗಳ ಮೂಲಕ ಅಕ್ರಮವಾಗಿ ಸೇಂದಿ ಮತ್ತು ಮಾದಕ ವಸ್ತುಗಳು ಸಾಗಣೆಯಾಗುವ ಸಾಧ್ಯತೆ ಇದೆ. ಇದನ್ನು ತಡೆಗಟ್ಟಲು ಅಬಕಾರಿ ಮತ್ತು ಪೊಲೀಸ್ ಇಲಾಖೆಗಳು ಒಗ್ಗೂಡಿ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಿ ಕಾರ್ಯಾಚರಣೆ ನಡೆಸಬೇಕು. ವೈದ್ಯಕೀಯ ಉದ್ದೇಶಕ್ಕೆ ಬಳಸುವ ಔಷಧಗಳು ದುರುಪಯೋಗವಾಗದಂತೆ ನೋಡಿಕೊಳ್ಳಲು ಮೆಡಿಕಲ್ ಕಾಲೇಜುಗಳು ಮತ್ತು ಔಷಧ ಮಳಿಗೆಗಳ ಮೇಲೆ ನಿಗಾ ಇಡಬೇಕು. ಅವಧಿ ಮುಗಿದ ಔಷಧಗಳ ವಿಲೇವಾರಿ ಬಗ್ಗೆಯೂ ಸರಿಯಾದ ಕ್ರಮ ವಹಿಸುವಂತೆ ಜಿಲ್ಲಾ ಔಷಧ ನಿಯಂತ್ರಕರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

 

ಡ್ರಗ್ ಸೇವೆನೆ ಪತ್ತೆ ಕಿಟ್ ಸರಬರಾಜು:
ಆರೋಗ್ಯ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಸಮುದಾಯ ಹಂತದ ಆಸ್ಪತ್ರೆಗಳಿಗೆ ಡ್ರಗ್ ಟೆಸ್ಟಿಂಗ್ ಕಿಟ್‌ಗಳನ್ನು ಸರಬರಾಜು ಮಾಡಬೇಕು. ಇದರ ವೆಚ್ಚನ್ನು ಜಿಲ್ಲಾಡಳಿತದಿಂದ ಭರಿಸಲಾಗುವುದು. ಪೊಲೀಸ್ ಇಲಾಖೆಯ ವತಿಯಿಂದಲೇ ಸ್ವಂತ ಖರ್ಚಿನಲ್ಲಿ ಡ್ರಗ್ ಟೆಸ್ಟಿಂಗ್ ಕಿಟ್‌ಗಳನ್ನು ಖರೀದಿಸಿ ಎಲ್ಲಾ ಪೊಲೀಸ್ ಠಾಣೆಗಳಿಗೆ ವಿತರಿಸಿದ್ದಾರೆ. ಇದರಿಂದ ಶಂಕಿತರನ್ನು ತಕ್ಷಣವೇ ಪರೀಕ್ಷೆಗೆ ಒಳಪಡಿಸಲು ಸಾಧ್ಯವಾಗಲಿದೆ. ಶಂಕಿತರನ್ನು ಪೊಲೀಸರು ಡ್ರಗ್ ಕಿಟ್ ಪರೀಕ್ಷೆ ಕರೆ ತಂದಾಗ ಯಾವುದೇ ವೈದ್ಯರು ಅಸಹಕಾರ ನೀಡಬಾರದು. ಹೊಳಲ್ಕೆರೆಯ ಸರ್ಕಾರಿ ವೈದ್ಯರೊಬ್ಬರು ಡ್ರಗ್ ಟೆಸ್ಟಿಂಗ್ ವರದಿ ನೀಡಲು ಅಸಹಕಾರ ತೋರುತ್ತಿರುವ ಬಗ್ಗೆ ದೂರು ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ವರದಿ ನೀಡಲು ವಿಳಂಬ ಮಾಡುತ್ತಿರುವ ಅಥವಾ ತಪಾಸಣಗೆ ನಿರಾಕರಿಸುತ್ತಿರುವ ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದರು.

 

ಯುವ ಪೀಳಿಗೆಗೆ ಮಾರಕವಾಗುತ್ತಿರುವ ಮಾದಕ ವಸ್ತು:
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟದ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಸಭೆಯಲ್ಲಿ ಕಳಕಳಿ ವ್ಯಕ್ತಪಡಿಸಿದರು.

 

ಜಿಲ್ಲೆಯಲ್ಲಿ ಗಾಂಜಾ ವಶಪಡಿಸಿಕೊಳ್ಳುವ ಪ್ರಮಾಣ ಮತ್ತು ವ್ಯಸನಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. 2023 ರಲ್ಲಿ 13 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದರೆ, 2024ರಲ್ಲಿ ಅದು 16 ಕೆಜಿಗೆ ಏರಿಕೆಯಾಗಿತ್ತು. 2025ರಲ್ಲಿ 35 ಕೆಜಿಯಷ್ಟು ಗಾಂಜಾ ಪತ್ತೆಯಾಗಿದ್ದು, ಪ್ರಸಕ್ತ 2026ರ ಮೊದಲ ಮೂರು ತಿಂಗಳಲ್ಲೇ ಈಗಾಗಲೇ 12 ಕೆಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮಾದಕ ವಸ್ತುಗಳ ಬಳಕೆಗೆ ಸಂಬAಧಿಸಿದAತೆ 2023 ರಲ್ಲಿ 51 ಪ್ರಕರಣಗಳು ದಾಖಲಾಗಿದ್ದರೆ, 2024ರಲ್ಲಿ 56 ಮತ್ತು 2025 ರಲ್ಲಿ 84 ಪ್ರಕರಣಗಳು ದಾಖಲಾಗಿವೆ. 2026ರ ಕೇವಲ ಮೂರು ತಿಂಗಳಲ್ಲಿ 31 ಪ್ರಕರಣಗಳು ದಾಖಲಾಗಿದ್ದು, 44 ಜನರನ್ನು ಬಂಧಿಸಲಾಗಿದೆ. ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವವರಲ್ಲಿ 18 ರಿಂದ 30 ವರ್ಷದೊಳಗಿನ ಯುವಕರು ಶೇ. 80 ರಿಂದ 90 ರಷ್ಟಿದ್ದಾರೆ ಎಂಬುದು ಅತ್ಯಂತ ದುಃಖಕರ ಸಂಗತಿಯಾಗಿದೆ. ದೇಶದ ಭವಿಷ್ಯವಾಗಬೇಕಾದ ಯುವ ಸಮುದಾಯವು ಈ ಮಾರಕ ವ್ಯಸನದ ಬಲೆಗೆ ಬೀಳುತ್ತಿರುವುದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದರು.

 

ಜಿಲ್ಲೆಗೆ ನೆರೆ ರಾಜ್ಯಗಳಾದ ಒಡಿಶಾ ಮತ್ತು ಆಂಧ್ರಪ್ರದೇಶದ ಮೂಲಕ ವಿವಿಧ ಮಾರ್ಗಗಳಿಂದ ಮಾದಕ ವಸ್ತುಗಳು ಸರಬರಾಜಾಗುತ್ತಿವೆ. ಒಡಿಶಾ – ವಿಶಾಖಪಟ್ಟಣಂ – ಬೆಂಗಳೂರು ಮಾರ್ಗವಾಗಿ ಚಲಿಸುವ ರೈಲುಗಳಲ್ಲಿ ಹೆಚ್ಚಿನ ಗಾಂಜ ರಾಜ್ಯಕ್ಕೆ ಸರಬರಾಜು ಆಗುತ್ತಿದೆ. ದಾವಣಗೆರೆ, ಚಳ್ಳಕೆರೆ, ಬಳ್ಳಾರಿ, ಹೊಸಪೇಟೆ ಮತ್ತು ಅನಂತಪುರದಿAದ ಜಿಲ್ಲೆಯಿಂದಲೂ ಡ್ರಗ್ ಪೆಡ್ರ‍್ಸ್ ಗಾಂಜಾ ಸರಬರಾಜು ಮಾಡುತ್ತಿದ್ದಾರೆ. ಗ್ರಾಮೀಣ ಭಾಗಗಳ ಹೊಲಗಳಲ್ಲಿ ಗಾಂಜಾ ಬೆಳೆಯುತ್ತಿರುವ ಪ್ರಕರಣಗಳೂ ಸಹ ಪತ್ತೆಯಾಗುತ್ತಿವೆ. ರೈಲ್ವೆ ನಿಲ್ದಾಣಗಳು ಮತ್ತು ಬಸ್‌ಗಳ ಮೂಲಕ ಸಾಗಣೆಯಾಗುವ ಮಾದಕ ವಸ್ತುಗಳನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ನಿರಂತರವಾಗಿ ತಪಾಸಣೆ ನಡೆಸಲಾಗುತ್ತಿದೆ. ಒಟ್ಟಾರೆಯಾಗಿ ಜಿಲ್ಲೆಯನ್ನು ಮಾದಕ ಮುಕ್ತಗೊಳಿಸಲು ಸಾರ್ವಜನಿಕರ ಸಹಕಾರವೂ ಅತ್ಯಗತ್ಯ ಎಂದು ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದರು.

 

ಅಂತರರಾಜ್ಯ ಮದ್ಯ ಮತ್ತು ಸ್ಪಿರಿಟ್ ಸಾಗಣೆ ತಡೆಗೆ ಬಿಗಿ ಕ್ರಮ:
ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮಾದಕ ವಸ್ತುಗಳ ಸಾಗಣೆಯನ್ನು ತಡೆಗಟ್ಟಲು ಅಬಕಾರಿ ಇಲಾಖೆಯು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಪ್ರಮುಖ ಗಡಿ ಭಾಗಗಳಾದ ಮೊಣಕಾಲ್ಮೂರು, ಚಳ್ಳಕೆರೆ ಮತ್ತು ಹಿರಿಯೂರು ತಾಲ್ಲೂಕು ಗಡಿ ಭಾಗದಲ್ಲಿ ಶಾಶ್ವತ ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ ಮೊಣಕಾಲ್ಮೂರು ಚೆಕ್‌ಪೋಸ್ಟ್ನಲ್ಲಿ ಇತ್ತೀಚೆಗೆ 48 ಲೀಟರ್ ಮದ್ಯವನ್ನು ಹೊತ್ತೊಯ್ಯುತ್ತಿದ್ದ ನಾಲ್ಕು ಚಕ್ರದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದಂತೆ ಗ್ರಾಮೀಣ ರಸ್ತೆಗಳ ಮೂಲಕ ಸಣ್ಣ ಪ್ರಮಾಣದಲ್ಲಿ ಸಾಗಿಸುತ್ತಿದ್ದ ಪ್ರಕರಣಗಳನ್ನು ಸಹ ಪತ್ತೆಹಚ್ಚಲಾಗಿದೆ ಎಂದು ಅಬಕಾರಿ ಉಪ ಆಯುಕ್ತೆ ಡಾ.ಆಶಾಲತಾ ಸಭೆಯಲ್ಲಿ ತಿಳಿಸಿದರು.

 

ಕಳೆದ ಸಾಲಿನಲ್ಲಿ ಅಬಕಾರಿ ಇಲಾಖೆಯಿಂದ ಒಟ್ಟು 23 ಪ್ರಕರಣಗಳನ್ನು ದಾಖಲಿಸಿ, 33 ಆರೋಪಿಗಳನ್ನು ಬಂಧಿಸಿಲಾಗಿದೆ. ಒಟ್ಟು 364 ಲೀಟರ್ ಮದ್ಯ ಹಾಗೂ 19 ವಾಹನಗಳನ್ನು ಜಪ್ತಿ ಮಾಡಲಾಗಿದೆ. ನೆರೆಯ ರಾಜ್ಯಗಳಾದ ಗೋವಾ ಹಾಗೂ ಬೆಳಗಾವಿ ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ಎನ್‌ಎಚ್-4 ಮತ್ತು ಎನ್‌ಎಚ್-13 ರಾಷ್ಟಿçÃಯ ಹೆದ್ದಾರಿಗಳಲ್ಲಿ ಮಾದಕ ದ್ರವ್ಯ ಹಾಗೂ ಸ್ಪಿರಿಟ್ ಸಾಗಣೆಯ ಮೇಲೆ ತೀವ್ರ ನಿಗಾ ಇಡಲಾಗಿದೆ. ಸರ್ಕಾರದ ಅನುಮತಿ ಪಡೆದು ಸ್ಪಿರಿಟ್ ಅಥವಾ ಮೆಥನಾಲ್ ಸಾಗಿಸುವ ವಾಹನಗಳನ್ನು ಜಿಲ್ಲೆಯ ಗಡಿಯಿಂದ ಮುಂದಿನ ಜಿಲ್ಲೆಯ ಗಡಿ ತಲುಪುವವರೆಗೆ ಅಬಕಾರಿ ತಂಡವು ರಾತ್ರಿಯಿಡೀ ಬೆಂಗಾವಲು ವಾಹನದ ಮೂಲಕ ರಕ್ಷಣೆ ನೀಡಿ ಯಾವುದೇ ದುರುಪಯೋಗವಾಗದಂತೆ ಎಚ್ಚರಿಕೆ ವಹಿಸುಲಾಗುತ್ತಿದೆ. ಅಂತರರಾಜ್ಯ ಮದ್ಯ ಸಾಗಣೆ ತಡೆಗಟ್ಟಲು ಆಂಧ್ರಪ್ರದೇಶದ ಅಧಿಕಾರಿಗಳೊಂದಿಗೆ ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ. ಅಲ್ಲದೆ, ಕಂಟ್ರೋಲ್ ರೂಮ್ ಸ್ಥಾಪಿಸಲಾಗಿದ್ದು, ಸಾರ್ವಜನಿಕರು ದೂರು ನೀಡಿದ ತಕ್ಷಣ ಸ್ಪಂದಿಸಲು ಹೋಮ್ ಗಾರ್ಡ್ಗಳ ತಂಡವನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ ಕಳ್ಳಭಟ್ಟಿ ಮತ್ತು ಅಕ್ರಮ ಸೇಂದಿ ಮಾರಾಟವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಠಿಣ ಕ್ರಮ ಕೈಗೊಂಡಿರುವುದಾಗಿ ಅಬಕಾರಿ ಉಪ ಆಯುಕ್ತೆ ಡಾ.ಆಶಾಲತಾ ಹೇಳಿದರು.

 

ಅಕ್ರಮ ನೀರಾ ಮಾರಾಟದ ವಿರುದ್ಧ ಕಾನೂನು ಕ್ರಮ:
ತೋಟಗಾರಿಕಾ ಇಲಾಖೆಯ ಸಮನ್ವಯದೊಂದಿಗೆ ಅಧಿಕೃತ ಪರವಾನಗಿ ಪಡೆದು ನೀರಾ ಮಾರಾಟ ಮಾಡಲು ಅವಕಾಶವಿದೆ. ಆದರೆ ಕಾನೂನು ಉಲ್ಲಂಘಿಸಿ ಜಿಲ್ಲೆಯ ಕೆಲ ರೈತ ಸಂಘಗಳ ಪರವಾನಗಿ ಪಡೆಯದೆ ನೀರ ಮಾರಾಟ ಮಾಡುತ್ತಿವೆ. ಈ ಹಿಂದೆ ಎಚ್ಚರಿಕೆ ನೀಡಿದ್ದರೂ ಪರವಾನಗಿ ಪಡೆಯದ ಹಿನ್ನೆಲೆಯಲ್ಲಿ ಅಂತಹ ಸಂಘಗಳ ವಿರುದ್ಧ ಪೊಲೀಸರಿಗೆ ಎಫ್‌ಐಆರ್ ದಾಖಲಿಸಲು ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

 

ಇದೇ ವೇಳೆ ಗಾಂಜಾ ಬೆಳೆಯುವುದರಿಂದ ಎದುರಿಸಬೇಕಾದ ಕಾನೂನು ಸಂಘರ್ಷದ ಕುರಿತು ರೈತರಿಗೆ ಜಾಗೃತಿ ಮೂಡಿಸಬೇಕು. ಬೆಳೆ ಸಮೀಕ್ಷೆ ಹಂತದಲ್ಲಿ ಸಮೀಕ್ಷಾಕಾರರಿಗೆ ಗಾಂಜಾ ಬೆಳೆಯ ಮಾಹಿತಿ ನೀಡಲು ತರಬೆತಿ ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶಾಲಾ ಕಾಲೇಜುಗಳ ಸುತ್ತಮುತ್ತಲಿನ ಗೂಡು ಅಂಗಡಿಗಳನ್ನು ತೆರವು ಮಾಡುವಂತೆ ನಗರ ಸಭೆ ಅಧಿಕಾರಿಗಳಿಗೆ ಆದೇಶಿಸಿದರು.

 

ಸಭೆಯಲ್ಲಿ ಉಪವಿಭಾಗಧಿಕಾರಿ ಡಾ.ಕೆ.ಜೆ.ಕಾಂತರಾಜು, ಪೊಲೀಸ್ ಉಪಾಧೀಕ್ಷಕರುಗಳಾದ ಅರುಣ್ ನಾಗೇಗೌಡ, ಶಿವಕುಮಾರ್, ಸತ್ಯನಾರಾಯಣ್ ರಾವ್ ಎಂ.ಜಿ., ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಜಿ.ಸವಿತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್ ಸೇರಿದಂತೆ ಮತ್ತಿರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...