ಜನಪ್ರಿಯ ಹಾಗೂ ಜನಸ್ನೇಹಿ ಕಾರ್ಯಕ್ರಮ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಕೋವಿಡ್ ನಂತರ ಪುನಃ ಆರಂಭಿಸುತ್ತಿದ್ದಾರೆ.
ದಾವಣಗೆರೆ ಜಿಲ್ಲೆಯ ಸುರಹೊನ್ನೆ ಮತ್ತು ಕುಂದೂರು ಗ್ರಾಮದಲ್ಲಿ ನಾಳೆ ಈ ಕಾರ್ಯಕ್ರಮ ನಡೆಯಲಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಸುರಹೊನ್ನೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಕಂದಾಯ ಸಚಿವ ಆರ್ ಅಶೋಕ್ ಕಾರ್ಯಕ್ರಮಮನ್ನು ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಆರ್ ಅಶೋಕ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಸಾಮಾಜಿಕ ಭದ್ರತಾ ಯೋಜನೆಯ ಅಡಿಯಲ್ಲಿ ಹಲವಾರು ಹಿರಿಯ ನಾಗರಿಕರಿಗೆ ಪಿಂಚಣಿ ವಿತರಿಸಲಿದ್ದಾರೆ.
ಮಧ್ಯಾಹ್ನ 4 ಗಂಟೆಗೆ ಸಚಿವರು ಕುಂದೂರು ಗ್ರಾಮಕ್ಕೆ ತೆರಳಿ ಜನರ ಸಮಸ್ಯೆಗಳನ್ನು ಖುದ್ದು ಆಲಿಸಿ ಪರಿಹಾರ ಮಾಡಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಅಲ್ಲಿಯೂ ಸಹ ಹಿರಿಯ ನಾಗರಿಕರಿಗೆ ಪಿಂಚಣಿ ವಿತರಿಸಲಿದ್ದಾರೆ. ರಾತ್ರಿ ಕಸ್ತೂರಬಾ ವಸತಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸರ್ಕಾರವೇ ಜನರ ಬಳಿ ತೆರಳಿ, ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಬೇಕೆನ್ನುವುದು ಕಂದಾಯ ಸಚಿವ ಆರ್ ಅಶೋಕ್ ಅವರ ಆಶಯವಾಗಿದೆ.