Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಶ್ರೀಮತಿ ಸಿ.ಕೆ. ಸಂಧ್ಯಾರವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರಧಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23 : ಉತ್ತಮ ಸೇವೆಗಾಗಿ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಸಿ.ಕೆ ಸಂದ್ಯಾರವರಿಗೆ ಬೆಂಗಳೂರಿನ ಜಯನಗರದ  ಮುಂಢ್ಕರ್ ಅಗ್ನಿಶಾಮಕ  ಅಕಾಡೆಮಿ ಸಂಭಾಗಣದಲ್ಲಿ ಗೃಹ ಸಚಿವರಾದ ಪರಮೇಶ್ವರ್‍ರವರು ಮುಖ್ಯ ಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಅಭಿನಂದನೆ : ಚಿತ್ರದುರ್ಗ ಜಿಲ್ಲಾ ಗೃಹರಕ್ಷಕದಳದ ಕಾಮೆಂಡೆಂಟ್ ಸಿ.ಕೆ. ಸಂಧ್ಯಾರವರ ಸೇವೆ ಪರಿಗಣಿಸಿ ಚಿನ್ನದ ಪದಕ ಲಭಿಸಿದಕ್ಕೆ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರು ಅಭಿನಂದನೆ ಸಲ್ಲಿಸಿದರು.

ಮಾದಾರ ಶ್ರೀಗಳಿಂದ ಅಭಿನಂದನೆ : ಮಾದಾರ ಗುರುಪೀಠದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಶ್ರೀಮತಿ ಸಿ.ಕೆ. ಸಂಧ್ಯಾರವರಿಗೆ ಮಾದಾರ ಗುರುಪೀಠದ ಚನ್ನಯ್ಯ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮೈಲಾರಲಿಂಗೇಶ್ವರ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಬಿ.ಟಿ.ಮಲ್ಲಯ್ಯ  ಟಿ.ಎಂ. ಪ್ರದೀಪ್‍ಕುಮಾರ್ ಹಾಗೂ ಜನಸಾಗರ ಪತ್ರಿಕೆ ಸಂಪಾದಕ ಡಿ.ಎನ್.ಕೃಷ್ಣಮೂರ್ತಿ ಉಪಸ್ಥಿತರಿದ್ದರು.

ಗೃಹರಕ್ಷಕ ಸಿಬ್ಬಂದಿಯವರಿಂದ ಅಭಿನಂದನೆ : ಚಿನ್ನದ ಪದಕ ಪ್ರಶಸ್ತಿ ಪಡೆದ ಸಿ.ಕೆ.ಸಂಧ್ಯಾರವರಿಗೆ ಗೃಹ ರಕ್ಷಕ ದಳದ ಸಿಬ್ಬಂದಿ ವರ್ಗದವರು ಕಛೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...