ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.23 : ಉತ್ತಮ ಸೇವೆಗಾಗಿ ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಸಿ.ಕೆ ಸಂದ್ಯಾರವರಿಗೆ ಬೆಂಗಳೂರಿನ ಜಯನಗರದ ಮುಂಢ್ಕರ್ ಅಗ್ನಿಶಾಮಕ ಅಕಾಡೆಮಿ ಸಂಭಾಗಣದಲ್ಲಿ ಗೃಹ ಸಚಿವರಾದ ಪರಮೇಶ್ವರ್‍ರವರು ಮುಖ್ಯ ಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಅಭಿನಂದನೆ : ಚಿತ್ರದುರ್ಗ ಜಿಲ್ಲಾ ಗೃಹರಕ್ಷಕದಳದ ಕಾಮೆಂಡೆಂಟ್ ಸಿ.ಕೆ. ಸಂಧ್ಯಾರವರ ಸೇವೆ ಪರಿಗಣಿಸಿ ಚಿನ್ನದ ಪದಕ ಲಭಿಸಿದಕ್ಕೆ ಗೃಹಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರು ಅಭಿನಂದನೆ ಸಲ್ಲಿಸಿದರು.
ಮಾದಾರ ಶ್ರೀಗಳಿಂದ ಅಭಿನಂದನೆ : ಮಾದಾರ ಗುರುಪೀಠದಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಶ್ರೀಮತಿ ಸಿ.ಕೆ. ಸಂಧ್ಯಾರವರಿಗೆ ಮಾದಾರ ಗುರುಪೀಠದ ಚನ್ನಯ್ಯ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮೈಲಾರಲಿಂಗೇಶ್ವರ ವಿದ್ಯಾಸಂಸ್ಥೆಯ ಸಂಸ್ಥಾಪಕರಾದ ಬಿ.ಟಿ.ಮಲ್ಲಯ್ಯ ಟಿ.ಎಂ. ಪ್ರದೀಪ್‍ಕುಮಾರ್ ಹಾಗೂ ಜನಸಾಗರ ಪತ್ರಿಕೆ ಸಂಪಾದಕ ಡಿ.ಎನ್.ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಗೃಹರಕ್ಷಕ ಸಿಬ್ಬಂದಿಯವರಿಂದ ಅಭಿನಂದನೆ : ಚಿನ್ನದ ಪದಕ ಪ್ರಶಸ್ತಿ ಪಡೆದ ಸಿ.ಕೆ.ಸಂಧ್ಯಾರವರಿಗೆ ಗೃಹ ರಕ್ಷಕ ದಳದ ಸಿಬ್ಬಂದಿ ವರ್ಗದವರು ಕಛೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










