ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, (ಜು.12) : ಎ.ಐ.ಸಿ.ಸಿ. ಯುವ ನೇತಾರ ರಾಹುಲ್‍ಗಾಂಧಿಗೆ ಕೇಂದ್ರ ಸರ್ಕಾರ ಕಿರುಕುಳ ನೀಡುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸಮೀಪ ಬುಧವಾರ ಮೌನ ಪ್ರತಿಭಟನೆ ನಡೆಸಲಾಯಿತು.
ಪ್ರಧಾನಿ ನರೇಂದ್ರಮೋದಿ ಮತ್ತು ಅದಾನಿ ನಡುವಿನ ಸಂಬಂಧವನ್ನು ರಾಹುಲ್‍ಗಾಂಧಿ ವಿವಿಧ ವೇದಿಕೆಗಳಲ್ಲಿ ನಿರಂತರವಾಗಿ ಪ್ರಶ್ನಿಸುತ್ತ ಸಾರ್ವಜನಿಕವಾಗಿ ಮೋದಿರವರ ದುರಾಡಳಿತ. ಅದಾನಿಯ ಲೂಟಿಕೋರತನವನ್ನು ಬಹಿರಂಗಪಡಿಸುತ್ತಿರುವುದರಿಂದ ಕೇಂದ್ರ ಸರ್ಕಾರ ರಾಹುಲ್‍ಗಾಂಧಿರವರನ್ನು ಸಂಸತ್ ಸ್ಥಾನದಿಂದ ಅನರ್ಹಗೊಳಿಸಿ ವಿನಾ ಕಾರಣ ಮಾನಸಿಕವಾಗಿ ಹಿಂಸೆ ನೀಡುತ್ತಿರುವುದು ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಕಾಂಗ್ರೆಸ್‍ನವರು ಮೌನವಾಗಿ ಪ್ರಧಾನಿ ಮೋದಿರವರ ಹಿಟ್ಲರ್‍ತನವನ್ನು ತೀವ್ರವಾಗಿ ಖಂಡಿಸಿದರು.
ಸತ್ಯ ಮತ್ತು ನ್ಯಾಯಕ್ಕಾಗಿ ರಾಹುಲ್‍ಗಾಂಧಿರವರು ಕೇಂದ್ರ ಸರ್ಕಾರದ ವಿರುದ್ದ ನಡೆಸುತ್ತಿರುವ ಹೋರಾಟಕ್ಕೆ ನಾವುಗಳು ಸದಾ ಜೊತೆಯಲ್ಲಿದ್ದೇವೆಂದು ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾರ್ಯಕರ್ತರು ಧರಣಿಯಲ್ಲಿ ಭಾಗವಹಿಸಿ ಬೆಂಬಲಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ.ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಹಿರಿಯ ಉಪಾಧ್ಯಕ್ಷರುಗಳಾದ ಜಿ.ಎಸ್.ಕುಮಾರ್‍ಗೌಡ, ಡಿ.ಟಿ.ವೆಂಕಟೇಶ್, ಶಬ್ಬೀರ್ ಅಹಮದ್, ಯುವ ಮುಖಂಡ ಜೆ.ಜೆ.ಹಟ್ಟಿ ಡಾ.ಬಿ.ತಿಪ್ಪೇಸ್ವಾಮಿ, ಮಾಜಿ ಶಾಸಕ ಎ.ಉಮಾಪತಿ, ವಿಧಾನಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ.ಸರ್ದಾರ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಎಸ್ಟಿ.ವಿಭಾಗದ ಅಧ್ಯಕ್ಷ ಹೆಚ್.ಅಂಜಿನಪ್ಪ, ಎಸ್ಸಿ. ವಿಭಾಗದ ಅಧ್ಯಕ್ಷ ಜಯಣ್ಣ, ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ವೃತ್ತಿಪರ ವಿಭಾಗದ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಕಾಶ್, ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ, ಉಪಾಧ್ಯಕ್ಷ ಎಲ್.ಬಿ.ರಾಜಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಲಕ್ಷ್ಮಿಕಾಂತ್, ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಅಬ್ದುಲ್ಲಾ, ಜಿಲ್ಲಾ ಕಾಂಗ್ರೆಸ್ ಮಹಿಳಾಧ್ಯಕ್ಷೆ ಗೀತ ನಂದಿನಿಗೌಡ, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಸೈಯದ್ ಖುದ್ದೂಸ್ ಸೇರಿದಂತೆ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಧರಣಿಯಲ್ಲಿ ಭಾಗವಹಿಸಿದ್ದರು.