ಸರ್ಕಾರಿ‌ ನೌಕರರ ಮೇಲಿನ ಸುಳ್ಳು ದೂರುಗಳನ್ನು ಪರಿಶೀಲಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾ ಸರ್ಕಾರಿ ನೌಕರರ ಮನವಿ..!

1 Min Read

ಚಿತ್ರದುರ್ಗ, (ಜ.21) : ಜಿಲ್ಲೆಗೆ ನೂತನವಾಗಿ ಅಧಿಕಾರವಹಿಸಿಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ಅವರನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಮಂಜುನಾಥ್ ಹಾಗೂ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿ ಡಮತ್ತು ನೌಕರರು ಶುಭ ಕೋರಿದರು.

ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಮೇಲೆ ನೀಡುವ ಸುಳ್ಳು ದೂರುಗಳನ್ನು ಮಾನ್ಯ ಮಾಡದೆ ಕೂಲಂಕುಷವಾಗಿ ಪರಿಶೀಲಿಸಿ ನಂತರ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಪರವಾಗಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ  ಜಿಲ್ಲಾ ಅಧ್ಯಕ್ಷ ಕೆ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಸಣ್ಣ ನೀರಾವರಿ ಇಲಾಖೆಯ ಪ್ರಕಾಶ್, ಆರೋಗ್ಯ ಇಲಾಖೆಯ ಮುರಳಿಧರ್, ನ್ಯಾಯಾಂಗ ಇಲಾಖೆಯ ನಿರ್ದೇಶಕರು ಹಾಗೂ ಕ್ರೀಡಾ ಕಾರ್ಯದರ್ಶಿಗಳಾದ ಶಶಿಧರ್, ಪೊಲೀಸ್ ಇಲಾಖೆಯ ನಿರ್ದೇಶಕರಾದ  ಅನಿತಾ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಜಿಲ್ಲಾಧ್ಯಕ್ಷರಾದ ನಾಗರಾಜ ಕೆ, ಪ್ರಧಾನ ಕಾರ್ಯದರ್ಶಿಗಳಾದ ನಯಾಜ್ ಅಹಮದ್ ರಾಜ,  ಗೌರವಾಧ್ಯಕ್ಷರಾದ  ರಮೇಶ್, ಉಪಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಬಿ.ಇ, ಜಿ.ಸಿ ಬಸವರಾಜ್, ಖಜಾಂಚಿ ಗಳಾದ ರಾಜು,  ಕುಮಾರ್, ಸಂತೋಷ್,  ಸಮಾಜ ಕಲ್ಯಾಣ ಇಲಾಖೆಯ ನೌಕರರಾದ ಬಸವರಾಜ್ ಮತ್ತು ದೇವರಾಜ್, ಹಾಗೂ ಇತರ ಇಲಾಖೆಗಳ ನೌಕರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *