ಚಿತ್ರದುರ್ಗ, (ಜ.21) : ಜಿಲ್ಲೆಗೆ ನೂತನವಾಗಿ ಅಧಿಕಾರವಹಿಸಿಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ಅವರನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಮಂಜುನಾಥ್ ಹಾಗೂ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿ ಡಮತ್ತು ನೌಕರರು ಶುಭ ಕೋರಿದರು.
ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಮೇಲೆ ನೀಡುವ ಸುಳ್ಳು ದೂರುಗಳನ್ನು ಮಾನ್ಯ ಮಾಡದೆ ಕೂಲಂಕುಷವಾಗಿ ಪರಿಶೀಲಿಸಿ ನಂತರ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಪರವಾಗಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಕೆ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಸಣ್ಣ ನೀರಾವರಿ ಇಲಾಖೆಯ ಪ್ರಕಾಶ್, ಆರೋಗ್ಯ ಇಲಾಖೆಯ ಮುರಳಿಧರ್, ನ್ಯಾಯಾಂಗ ಇಲಾಖೆಯ ನಿರ್ದೇಶಕರು ಹಾಗೂ ಕ್ರೀಡಾ ಕಾರ್ಯದರ್ಶಿಗಳಾದ ಶಶಿಧರ್, ಪೊಲೀಸ್ ಇಲಾಖೆಯ ನಿರ್ದೇಶಕರಾದ ಅನಿತಾ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಜಿಲ್ಲಾಧ್ಯಕ್ಷರಾದ ನಾಗರಾಜ ಕೆ, ಪ್ರಧಾನ ಕಾರ್ಯದರ್ಶಿಗಳಾದ ನಯಾಜ್ ಅಹಮದ್ ರಾಜ, ಗೌರವಾಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಬಿ.ಇ, ಜಿ.ಸಿ ಬಸವರಾಜ್, ಖಜಾಂಚಿ ಗಳಾದ ರಾಜು, ಕುಮಾರ್, ಸಂತೋಷ್, ಸಮಾಜ ಕಲ್ಯಾಣ ಇಲಾಖೆಯ ನೌಕರರಾದ ಬಸವರಾಜ್ ಮತ್ತು ದೇವರಾಜ್, ಹಾಗೂ ಇತರ ಇಲಾಖೆಗಳ ನೌಕರರು ಉಪಸ್ಥಿತರಿದ್ದರು.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…