ಹೊಳಲ್ಕೆರೆ, ಮಾರ್ಚ್. 18 : 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮಾ. 27 ಮತ್ತು 28 ರಂದು ಜರುಗಲಿದೆ. ಜಿಲ್ಲಾ ವ್ಯಾಪ್ತಿಯ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆ ಮತ್ತು ಕಾಲೇಜುಗಳ ಉಪನ್ಯಾಸಕರು, ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಅನ್ಯ ಕಾರ್ಯನಿಮಿತ್ತ (ಓಓಡಿ) ಸೌಲಭ್ಯ ಒದಗಿಸಿಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕಾಲೇಜು ವಿಭಾಗದ ಉಪನಿರ್ದೇಶಕರು ಮತ್ತು ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕರು ಆದೇಶ ನೀಡಿದ್ದಾರೆ. ಭಾಗವಹಿಸಿದ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಹಾಜರಾತಿ ಪ್ರಮಾಣ ಪತ್ರವನ್ನು ನೀಡಲಿದೆ. ಶಿಕ್ಷಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮ್ಮೇಳನ ಯಶಸ್ವಿಗೊಳಿಸಲು ಕಸಾಪ ಜಿಲ್ಲಾ ಅಧ್ಯಕ್ಷ ಶಿವಸ್ವಾಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮ್ಮೇಳನಕ್ಕೆ ಹಾಜರಾಗುವ ಶಿಕ್ಷಕರು ಆಯಾ ತಾಲ್ಲೂಕು ಕಸಾಪ ಅಧ್ಯಕ್ಷರು ಅಥವ ಜಿಲ್ಲಾ ಕಾರ್ಯದರ್ಶಿಗಳನ್ನು ಸಂಪರ್ಕಿಸಿ ನೊಂದಾಯಿಸಲು ಕನ್ನಡ ಸಾಹಿತ್ಯ ಪರಿಷತ್ತು ಕೋರಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ, 9980383294, 8310762431,9449510078.


