ಹೊಳಲ್ಕೆರೆ, ಮಾರ್ಚ್. 18 : 17 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮಾ. 27 ಮತ್ತು 28 ರಂದು ಜರುಗಲಿದೆ. ಜಿಲ್ಲಾ ವ್ಯಾಪ್ತಿಯ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆ ಮತ್ತು ಕಾಲೇಜುಗಳ ಉಪನ್ಯಾಸಕರು, ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಅನ್ಯ ಕಾರ್ಯನಿಮಿತ್ತ (ಓಓಡಿ) ಸೌಲಭ್ಯ ಒದಗಿಸಿಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕಾಲೇಜು ವಿಭಾಗದ ಉಪನಿರ್ದೇಶಕರು ಮತ್ತು ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕರು ಆದೇಶ ನೀಡಿದ್ದಾರೆ. ಭಾಗವಹಿಸಿದ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಹಾಜರಾತಿ ಪ್ರಮಾಣ ಪತ್ರವನ್ನು ನೀಡಲಿದೆ. ಶಿಕ್ಷಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮ್ಮೇಳನ ಯಶಸ್ವಿಗೊಳಿಸಲು ಕಸಾಪ ಜಿಲ್ಲಾ ಅಧ್ಯಕ್ಷ ಶಿವಸ್ವಾಮಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮ್ಮೇಳನಕ್ಕೆ ಹಾಜರಾಗುವ ಶಿಕ್ಷಕರು ಆಯಾ ತಾಲ್ಲೂಕು ಕಸಾಪ ಅಧ್ಯಕ್ಷರು ಅಥವ ಜಿಲ್ಲಾ ಕಾರ್ಯದರ್ಶಿಗಳನ್ನು ಸಂಪರ್ಕಿಸಿ ನೊಂದಾಯಿಸಲು ಕನ್ನಡ ಸಾಹಿತ್ಯ ಪರಿಷತ್ತು ಕೋರಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ, 9980383294, 8310762431,9449510078.
ಸುದ್ದಿಒನ್ : ಬೆಲ್ಲವನ್ನು ಕಬ್ಬಿನ ರಸ ಅಥವಾ ತಾಳೆ ಹಣ್ಣಿನ ರಸದಿಂದ ತಯಾರಿಸಲಾಗುತ್ತದೆ. ಇದು ಸಂಸ್ಕರಿಸದ, ಶುದ್ದಿ ಮಾಡದ ನೈಸರ್ಗಿಕ…
ಈ ರಾಶಿಯವರಿಗೆ ಮದುವೆ ಮಾಡಿಕೊಳ್ಳಲು ಬರುವರು ಆದರೆ ಫಿಕ್ಸ್ ಆಗುತ್ತಿಲ್ಲ, ಈ ರಾಶಿಯವರಿಗೆ ಕೆಲಸಗಳ ಆಫರ್ ತುಂಬಾ ಇದೆ, ಗುರುವಾರದ…
ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…
ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…