ನಾಯಕನಹಟ್ಟಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಎರಡು ದಿನಗಳ ಒಒಡಿ ಸೌಲಭ್ಯ

suddionenews
1 Min Read

ಚಿತ್ರದುರ್ಗ, (ಜ.18) :ನಾಯಕನಹಟ್ಟಿಯಲ್ಲಿ ಜನವರಿ 21 ಮತ್ತು 22 ರಂದು ಜರುಗಲಿರುವ 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿಗೆ ಶಿಕ್ಷಣ ಇಲಾಖೆ ಅನ್ಯ ಕಾರ್ಯ ನಿಮಿತ್ತ (ಒಒಡಿ) ಸೌಲಭ್ಯ ಒದಗಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿಯವರ ಮನವಿಯ ಮೇರೆಗೆ ಡಿಡಿಪಿಐ ಕೆ.ರವಿಶಂಕರ ರೆಡ್ಡಿಯವರು ಈ ಆದೇಶ ನೀಡಿದ್ದಾರೆ. ಎರಡು ದಿನಗಳ ಕಾಲ ಜಿಲ್ಲಾ ವ್ಯಾಪ್ತಿಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಶಿಕ್ಷಕರು ಹಾಗೂ ಸಿಬ್ಬಂದಿ ಸಾಹಿತ್ಯಾಭಿರುಚಿ ಬೆಳೆಸುವ ಈ ಕಾರ್ಯಕ್ರಮದಲ್ಲಿ ಒಒಡಿ ಸೌಲಭ್ಯ ಪಡೆದು ಹಾಜರಾಗಬಹುದು.

ಸಮ್ಮೇಳನದಲ್ಲಿ ಭಾಗವಹಿಸಿದ ಶಿಕ್ಷಕರು ಹಾಗೂ ಸಿಬ್ಬಂದಿ ಪರಿಷತ್ತಿನಿಂದ ಹಾಜರಾತಿ ಪ್ರಮಾಣ ಪತ್ರ ಪಡೆದು ಸಂಬಂಧಿಸಿದ ಶಾಲಾ ಮುಖ್ಯಶಿಕ್ಷಕರಿಗೆ ಸಲ್ಲಿಸುವುದು ಕಡ್ಡಾಯವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *