ದಾವಣಗೆರೆ ಮಾ.10 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಇವರ ಸಹಯೋಗದಲ್ಲಿ ಮಾರ್ಚ್ 15 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹದಡಿ ರಸ್ತೆಯಲ್ಲಿರುವ ಸರ್ಕಾರಿ ಐ.ಟಿ.ಐ ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಉದ್ಘಾಟಿಸುವರು. ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣಪ್ರಕಾಶ ರುದ್ರಪ್ಪ ಪಾಟೀಲ್ ಘನಉಪಸ್ಥಿತರಿರುವರು. ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ ನಾಯಕ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ಅಸಗೋಡು ಜಯಸಿಂಹ, ರಾಜ್ಯ ತಾಂಡ ಅಭಿವೃದ್ದಿ ನಿಗಮದ ಅಧ್ಯಕ್ಷ ಜಯದೇವನಾಯ್ಕ್, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್, ದಾವಣಗೆರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಭಿಯಾನ ನಿರ್ದೇಶಕರಾದ ಪಿ.ಐ.ಶ್ರೀವಿದ್ಯಾಶ್ರೀ, ವ್ಯವಸ್ಥಾಪಕ ನಿರ್ದೇಶಕರಾದ ಡಾ.ರಾಗಪ್ರಿಯ.ಆರ್, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಬಿ. ಇಟ್ನಾಳ್. ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ ಮಲ್ಲಾಡದ, ಐ.ಟಿ.ಐ ಕಾಲೇಜಿನ ಪ್ರಾಚಾರ್ಯರರಾದ ಏಕನಾಥ.ಎನ್ ಭಾಗವಹಿಸುವರು.
ಈ ರಾಶಿಯವರು ಹೊಸದಾಗಿ ವ್ಯಾಪಾರ ಪ್ರಾರಂಭ ಮಾಡಿದ್ದಾರೆ ಕೈಹಿಡಿದರೆ ಸಾಕು, ಈ ರಾಶಿಯವರು ಮದುವೆಯಾಗಿ ತಿಂಗಳಾಯಿತು ಕಲಹಗಳು ಶುರು, ಮಂಗಳವಾರದ…
ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…
ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…
ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…
ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…