ಏ.22 ಹಾಗೂ 23 ರಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ : ಕೆ.ಮಂಜುನಾಥ

ಚಿತ್ರದುರ್ಗ,(ಏ.20): ಚಿತ್ರದುರ್ಗ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಏ.22 ಹಾಗೂ 23 ರಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಮಂಜುನಾಥ ಹೇಳಿದರು.

ನಗರದ ಪತ್ರಿಕಾಭವನದಲ್ಲಿಂದು ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಕ್ರೀಡಾ ಕೂಟದಲ್ಲಿ ಭಾಗವಹಿಸುವ ನೌಕರರಿಗೆ ಓಓಡಿ ಸೌಲಭ್ಯವನ್ನು ಜಿಲ್ಲಾಡಳಿತದಿಂದ ನೀಡಲಾಗಿದೆ. ಫುಟ್ಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ್ ಟೆನ್ನಿಸ್, ಟೆನ್ನಿಸ್, ಬ್ಯಾಡ್ಮಿಂಟನ್, ಕ್ರಿಕೇಟ್, ಬ್ಯಾಸ್ಕೇಟ್ ಬಾಲ್, ಚೆಸ್, ಟೆನ್ನಿಕಾಯ್ಟ್, ಥ್ರೋಬಾಲ್, ಈಜು,ಕುಸ್ತಿ, ವೇಟ್ ಲಿಫ್ಟಿಂಗ್, ರನ್ನಿಂಗ್ ರೇಸ್, ರಿಲೇ,ಲಾಂಗ್ ಜಂಪ್, ಹೈ ಜೆಂಪ್, ಶಾಟ್ ಪುಟ್, ಡಿಸ್ಕಸ್ ಥ್ರೋ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದೆ. ಸಂಗೀತ, ನೃತ್ಯ ಹಾಗೂ ವಾಧ್ಯ ಸಂಗೀತಗಳಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಖಾಯಂ ಸರ್ಕಾರಿ ನೌಕರರು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಪೊಲೀಸ್, ಅರಣ್ಯ ಇಲಾಖೆ ಸಮವಸ್ತ್ರ ವೃಂದ ನೌಕರರು, ದೈಹಿಕ ಶಿಕ್ಷಕರು ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ. ಸಂಗೀತ, ನೃತ್ಯ, ಕಲಾ ಶಿಕ್ಷಕರು, ಸಂಗೀತ, ನೃತ್ಯ ಹಾಗೂ ಕರಕುಶಲ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ. ಪೊಲೀಸ್ ಹಾಗೂ ಅರಣ್ಯ ಇಲಾಖೆ ಲಿಪಕ ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಬಹದು. ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ನೌಕರರು ಕಡ್ಡಾಯವಾಗಿ ನಿಯಮ ಪಾಲನೆ ಮಾಡಬೇಕಿದೆ ಎಂದರು.

ಕೃಷಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಬಿ.ಸಿ.ಪಾಟೀಲ್ ಕ್ರೀಡಾ ಜ್ಯೋತಿ ಬೆಳಗಿಸುವುದರ ಮೂಲಕ ಕ್ರೀಡಾ ಕೂಟವನ್ನು ಉದ್ಘಾಟಿಸುವರು. ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಕ್ರೀಡಾ ಜ್ಯೋತಿ ಸ್ವೀಕರಿಸುವರು. ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮಾತ್ತು ಸಬಲೀಕರಣ ಸಚಿವರಾದ ಎ.ನಾರಾಯಣಸ್ವಾಮಿ ಘನ ಉಪಸ್ಥಿತರಿರುವರು. ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಅಧ್ಯಕ್ಷತೆ ವಹಿಸುವರು.

ವಿಧಾನ ಪರಿಷತ್ ಮುಖ್ಯ ಸಚೇತಕರು ಹಾಗೂ ಶಾಸಕರಾದ ಡಾ.ವೈ.ಎ.ನಾರಾಯಣಸ್ವಾಮಿ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ, ಶಾಸಕರಾದ ಗೂಳಿಹಟ್ಟಿ ಡಿ ಶೇಖರ್, ಟಿ.ರಘುಮೂರ್ತಿ, ಪೂರ್ಣಿಮಾ ಕೆ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಿ.ಟಿ.ಸುರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿ.ಪಂ.ಸಿಇಓ ಡಾ.ಕೆ.ನಂದಿನಿದೇವಿ, ಜಿಲ್ಲಾ ರಕ್ಷಣಾಧಿಕಾರಿ ಪರಶುರಾಮ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರಥಮ ಭಾರಿಗೆ ಸರ್ಕಾರಿ ನೌಕರರ ದಿನಾಚರಣೆಯನ್ನು ಏಪ್ರಿಲ್ 21 ರಂದು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.

ಸಮಾರಂಭದಲ್ಲಿ 10 ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು. ಸರ್ಕಾರ ರಾಜ್ಯ ಮಟ್ಟದ ಪ್ರಶಸ್ತಿ ಮೊತ್ತವನ್ನು 25 ಸಾವಿರದಿಂದ 50 ಸಾವಿರಕ್ಕೆ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿ ಮೊತ್ತವನ್ನ 10 ಸಾವಿರದಿಂದ 25 ಸಾವಿರಕ್ಕೆ ಹೆಚ್ಚಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್.ಜೆ.ಆರ್, ಕೀಡಾ ಇಲಾಖೆ ಸಹಾಯಕ ನಿರ್ದೇಶಿಕಿ ಜಯಲಕ್ಷ್ಮಿ ಬಾಯಿ, ಕ್ರೀಡಾ ತರಬೇತುದಾರ ಮಹಿಬುಲ್ಲ ಬಾಬು ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!