ಚಿತ್ರದುರ್ಗ, ( ಏ.30) : ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ಮೇ 2ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಮೇ 2ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಬೆಳಿಗ್ಗೆ 11:30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ವತಿಯಿಂದ ಕೇಂದ್ರದ ಜಲಪ್ರಹರಿ ಪ್ರಶಸ್ತಿ ಪುರಸ್ಕøತ ಭದ್ರಾ ಮೇಲ್ದಂಡೆ ಮುಖ್ಯ ಇಂಜಿನಿಯರ್ (ನಿವೃತ್ತಿ) ಚೆಲುವರಾಜ್ ಅವರಿಗೆ ಬಯಲು ಸೀಮೆ ಗೌರವ ಸಮಾರಂಭದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ಎ.ನಾರಾಯಣ ಸ್ವಾಮಿ ಅವರೊಂದಿಗೆ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 2.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ್ ತಿಳಿಸಿದ್ದಾರೆ.






GIPHY App Key not set. Please check settings